Home ಸುದ್ದಿಗಳು ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ನೌಕರಿ
ಸುದ್ದಿಗಳು

ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ನೌಕರಿ

Share
ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ನೌಕರಿ
Share

ಬೆಂಗಳೂರು : ರಸ್ತೆ ಅಪಘಾತದಲ್ಲಿ ಮೃತಪಟ್ಡಿದ್ದ ದಿವಂಗತ ಐಎಎಸ್‍ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರ ಮೇಲೆ  ರಾಜ್ಯ ಸರ್ಕಾರಕೆಲಸ ನೀಡಿದೆ.

ಸೇವೆಯಲ್ಲಿರುವಾಗ 2025, ನ.25ರಂದು  ಮಹಾಂತೇಶ್ ಬೀಳಗಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪುತ್ರಿ ಚೈತನ್ಯಾ ಎಂ.ಬೀಳಗಿ ಅವರಿಗೆ ಕರ್ನಾಟಕ ನಾಗರೀಕಾ ಸೇವಾ ನಿಯಮದ ಪ್ರಕಾರ ಸರ್ಕಾರದ ಸಚಿವಾಲಯದಲ್ಲಿನ ವೇತನ ಶ್ರೇಣಿ 49050-1250-52800-1375-58300-1500-64300-1650-74200-1900-85600-2300-925000) ಸಹಾಯಕ‌ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ಹಾಗೂ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಅನುಕಂಪದ ಆಧಾರದ ಮೇಲೆ ನೇಮಕ ಮಾಡಿದೆ. ನೇಮಕಾತಿ ಆದೇಶದಲ್ಲಿ ನಿಬಂಧನೆಗಳಿವೆ.

ಷರತ್ತು ಮತ್ತು ನಿಬಂಧನೆಗಳು:

  1. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿಗಳು 1977ರ ನಿಯಮ 18 ರನ್ವಯ, ನೇಮಕಾತಿ ಆದೇಶವನ್ನು ತುರ್ತು ಅಂಚೆ ಮೂಲಕ ಹೊರಡಿಸಿದ 15 ದಿವಸಗಳ ಒಳಗಾಗಿ, ಅಭ್ಯರ್ಥಿಯು ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ-1), ಕೊಠಡಿ ಸಂಖ್ಯೆ:428, 4ನೇ ಮಹಡಿ, ಬಹುಮಹಡಿ ಕಟ್ಟಡ, ಡಾ।। ಬಿ. ಆರ್. ಅಂಬೇಡ್ಕರ್ ಬೀದಿ. ಬೆಂಗಳೂರು-01, ಇವರ ಮುಂದೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು.
  1. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿಗಳು 1977ರ ನಿಯಮ 10 ರನ್ವಯ, ಅಭ್ಯರ್ಥಿಯ ಸಂಬಂಧಿಕರಲ್ಲದ ಅವರು ವ್ಯಾಸಂಗ ಮಾಡಿದ ಕಾಲೇಜು ಅಥವಾ ವಿಶ್ವವಿದ್ಯಾಲಯಕ್ಕೆ ಸಂಬಂಧಪಡದ ಇಬ್ಬರು ಗಣ್ಯ ವ್ಯಕ್ತಿಗಳಿಂದ ನಡತೆ ಪ್ರಮಾಣಪತ್ರವನ್ನು ಸಲ್ಲಿಸುವುದು,

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.