Home ಹೊಸಪೇಟೆ : ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ 
Homeಕ್ರೀಡೆ

ಹೊಸಪೇಟೆ : ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ 

Share
ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ 
Share

ವಿಜಯನಗರ, (ಹೊಸಪೇಟೆ) : ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಅದರ ಬಗ್ಗೆ ಚಿಂತಿಸದೇ ಕ್ರೀಡೆಯಲ್ಲಿ ಆರೋಗ್ಯಯುತವಾದ ಸ್ಪರ್ಧಾತ್ಮಕ ಮನೋಭಾವ ಮುಖ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೌಕರರು ಕೆಲಸದ ಒತ್ತಡದ ಮಧ್ಯೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಸ್ಪರ್ಧೆಯ ಸೋಲು ಗೆಲುವಿನ ಬಗ್ಗೆ ಗಮನ ಕೊಡದೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಕ್ರೀಡಾಕೂಟ ಯಶಸ್ವಿಗೊಳಿಸುವಂತೆ ತಿಳಿಸಿದರು.
ಡಿ ಗ್ರೂಪ್ ನೌಕರರ ಸಂಘದ ಅಜಯ್ ಮದಕರಿ ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನದಿಂದ 5ನೇ ಬಾರಿಗೆ ಜಿಲ್ಲಾ ಕ್ರೀಡಾಂಗಣದ ಪುನಿತ್ ರಾಜ್‌ಕುಮಾರ್ ವೇದಿಕೆಗೆ ಜ್ಯೋತಿ ತರಲಾಯಿತು.
ಈ ವೇಳೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ , ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.