Home ಸುದ್ದಿಗಳು ಕಲೆ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಸಂಗೀತ ನಿನಾದ
ಕಲೆಸುದ್ದಿಗಳು

ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಸಂಗೀತ ನಿನಾದ

Share
Share

ವಿಜಯನಗರ(ಹಂಪಿ) : ಹಂಪಿ ಉತ್ಸವದ ಅಂಗವಾಗಿ ಶ್ರೀಕೃಷ್ಣದೇವರಾಯ ವೇದಿಕೆ(ಎದುರು ಬಸವಣ್ಣ)ಯಲ್ಲಿ ಮೊದಲನೇಯ ದಿನವಾದ ಶುಕ್ರವಾರ ಸಾಂಸ್ಕೃತಿಕ ಲೋಕವೇ ಅನಾವರಣಗೊಂಡಿತ್ತು.
ವಿವಿಧ ಸಾಂಸ್ಕೃತಿಕ ಕಲಾತಂಡಗಳಿಂದ ಹೊರಹೊಮ್ಮಿದ ಸಂಗೀತ ನಿನಾದವು ಹಂಪಿಯ ಕಲ್ಲುಗಳಲ್ಲಿ ಝೇಂಕಾರಗೊಂಡಿತು.
ಯಲಬುರ್ಗಾದ ಹನುಮಪ್ಪ ದಾಸರ ತಂಡದವರು ‘ಮೂಕನಾಗಬೇಕು ಜಗದೋಳು ಭಾಗ್ಯ ನೀನಾಗಬೇಕು’ ಸಂಗೀತ ಗಾಯನ ಪ್ರಸ್ತುತ ಪಡಿಸುವ ಮೂಲಕ ಜಾನಪದ ಲೋಕವನ್ನೇ ಸೃಷ್ಟಿಸಿದರು.

   

ಮಿಂಚು ಸಿಜೆ ಅವರು, ಶಿವ ತಾಂಡವ ಗಾಯನಕ್ಕೆ ರೋಮಾಂಚನಗೊಳ್ಳುವ ಭರತನಾಟ್ಯ ನೃತ್ಯ ಪ್ರದರ್ಶಿಸಿದರು.ಹಾವೇರಿಯ ಗದಗಯ್ಯ ಹಿರೇಮಠ ತಂಡವು ಉಧೋ ಎಲ್ಲಮ್ಮ ತಾಯಿ, ಎಲ್ಲಿ ಕಾಣೆ-ಎಲ್ಲಿ ಕಾಣೆ ಯಲ್ಲಮ್ಮ ನಿನ್ನಂತವಳನ್ನ ಗಾಯನ ಸಾದರಪಡಿಸುವ ಮೂಲಕ ಜೋಗತಿ ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಸಂಗೀತ, ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆದವು.
ಸಹಾಯಕ ಆಯುಕ್ತ ಸುರೇಶ್ ಕುಮಾರ್ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.
ಭಾಗವಹಿಸಿದ್ದ ಕಲಾವಿದರೆಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.