Home ಶಿಕ್ಷಣ ವಿಚಾರಗೋಷ್ಠಿಯಲ್ಲಿ ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ : ಕನ್ನಡ ವಿ.ವಿ. ವತಿಯಿಂದ ಮಕ್ಕಳಗೆ ಐತಿಹಾಸಿಕ ಪ್ರಜ್ಞೆ ಮೂಡಿಸುವ ಕಾರ್ಯಕ್ರಮ
ಶಿಕ್ಷಣಸುದ್ದಿಗಳು

ವಿಚಾರಗೋಷ್ಠಿಯಲ್ಲಿ ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ : ಕನ್ನಡ ವಿ.ವಿ. ವತಿಯಿಂದ ಮಕ್ಕಳಗೆ ಐತಿಹಾಸಿಕ ಪ್ರಜ್ಞೆ ಮೂಡಿಸುವ ಕಾರ್ಯಕ್ರಮ

Share
Share

ವಿಜಯನಗರ:
ಮಕ್ಕಳಲ್ಲಿ ತಿಳುವಳಿಕೆ ಮೂಡಿಸಿ,ಹಂಪಿಯ ಇತಿಹಾಸ ಪರಂಪರೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕನ್ನಡ ವಿಶ್ವದ್ಯಾಲಯದಿಂದ ತಿಂಗಳಿಗೊಮ್ಮೆ ವಿಶೇಷ ಉಪನ್ಯಾಸ ಏರ್ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹೆಚ್.ಆರ್ ಗವಿಯಪ್ಪ ತಿಳಿಸಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿ ಹಾಗೂ ವಿಜಯನಗರ ಜಿಲ್ಲಾಡಳಿತ ದ ಸಹಯೋಗದಲ್ಲಿ ಹಂಪಿ ಉತ್ಸವ-2026 ರ ಪ್ರಯುಕ್ತ ಕಮಲಾ ಮಹಲ್ ವೇದಿಕೆಯಲ್ಲಿ ವಿಜಯನಗರ ಅಧ್ಯಯನ ಕುರಿತು ಆಯೋಜಿಸಲಾದ 28ನೇ ವಾರ್ಷಿಕ ವಿಚಾರ ಸಂಕಿರಣವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ  ಅವರು ಮಾತನಾಡಿದರು.
ಹಂಪಿ ಅಭಿವೃದ್ದಿಗಾಗಿ ಭಾರತೀಯ ಪುರಾತತ್ವ ಇಲಾಖೆಗೆ ಹೊಸ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಂಪಿಯ ಎಲ್ಲಾ ದೇವಾಲಯಗಳು, ಸ್ಮಾರಕಗಳನ್ನು ಪ್ರವಾಸಿಗರು ಸುಗಮವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಸ್ಮಾರಕಗಳನ್ನು  ಸಂಪರ್ಕಿಸುವ ರಸ್ತೆ ನಿರ್ಮಿಸುಲು ಟ್ರಾವೆಲ್ ರೋಡ್ಸ್ ಯೋಜನೆಯನ್ನು ರೂಪಿಸಲಾಗಿದೆ.  ಇದರಿಂದ ನೂರಾರು ಸ್ಮಾರಕಗಳನ್ನು ಪ್ರವಾಸಿಗರು ಸರಾಗವಾಗಿ ನೋಡಬಹುದು ಎಂದು‌ ಶಾಸಕ ಗವಿಯಪ್ಪ ಹೇಳಿದರು.

ಕೂಡ್ಲಿಗಿ ಶಾಸಕ ಶ್ರೀನಿವಾಸ್ ಎನ್.ಟಿ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಕಾಲದಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ಗೊಂದಲಯಮಯವಾಗಿದೆ. ಈ ಹಿನ್ನಲೆಯಲ್ಲಿ ವಿಜಯನಗರದ ಇತಿಹಾಸವನ್ನು ಯುವಜನರಿಗೆ ತಿಳಿಸುವ ಜವಾಬ್ದಾರಿ  ನಮ್ಮ ನಿಮ್ಮೆಲ್ಲರ ಮೇಲಿದೆ. ಕನ್ನಡ ವಿಶ್ವವಿದ್ಯಾಲಯದಿಂದ ಹಂಪಿಯ ಕುರಿತು ಹೆಚ್ಚು ಅಧ್ಯಯನಗಳು ನಡೆದಿವೆ. ಆದರೆ ಇತ್ತೀಚಿಗೆ ವಿಶ್ವವಿದ್ಯಾಲಯ ಅನುದಾನದ ಕೊರತೆಯಿಂದ ಸೊರಗುತ್ತಿದ್ದು, ಇದಕ್ಕೆ ಪರಿಹಾರ ಕಲ್ಪಿಸಲು ಸರ್ಕಾರದೊಂದಿಗೆ ಮಾತನಾಡಲಾಗಿದೆ ಎಂದರು.
ಪುರಾತತ್ತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ.ಎ  ಮಾತನಾಡಿ ವಿಜಯನಗರ ಅಧ್ಯಯನ ಕುರಿತ ವಿಚಾರ ಸಂಕಿರಣ  ಇತಿಹಾಸದ ಮಾರ್ಗದರ್ಶನ, ಪುನರ್ ಅವಲೋಕನಕ್ಕೆ ಅವಕಾಶ ಮಾಡಿಕೊಡುತ್ತದೆ. ರಾಜ್ಯ ಪುರಾತತ್ವ ಇಲಾಖೆಯು ಗ್ರಾಮವಾರು ಪ್ರಾಚ್ಯ ಅವಶೇಷಗಳ ಸರ್ವೇಕ್ಷಣಾ ಕಾರ್ಯದ ಮೂಲಕ 119 ತಾಲೂಕುಗಳನ್ನು ಸರ್ವೆ ನಡೆಸಲಾಗಿದೆ. ಗ್ರಾಮಗಳ ಸರ್ವೆ ಮೂಲಕ ಲಭ್ಯವಿರುವ ಪ್ರಾಚ್ಯ ಅವಶೇಷಗಳನ್ನು ದಾಖಲೀಕರಣಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

 

ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮಾತನಾಡಿ ಹಂಪಿಯ ಉತ್ಖನನದಲ್ಲಿ ಇತಿಹಾಸಕಾರರ ಪಾತ್ರ ಮಹತ್ತರವಾದುದು. ಇನ್ನು ಹೆಚ್ಚು ಅಧ್ಯಯನಗಳು ನಡೆಯಲಿ ಎಂದು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿರುಪಾಕ್ಷಿ ಪೂಜಾರಹಳ್ಳಿ ವಿಚಾರ ಸಂಕಿರಣದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿ, ಹಂಪಿಯ ಕುರಿತು ಬಹು ಶಿಸ್ತು ಮತ್ತು ಅಂತರ್ ಶಿಸ್ತು ನೆಲೆಯಲ್ಲಿ ಅಧ್ಯಯನಗಳು ನಡೆಯಬೇಕು. ವಿಜಯನಗರ ಕಾಲದಲ್ಲಿ ರಚನೆಯಾದ ಸಾಹಿತ್ಯ ಕೃತಿಗಳನ್ನು ಇತಿಹಾಸ ರಚನೆಯಲ್ಲಿ ಆಕಾರಗಳಾಗಿ ಪರಿಶೀಲಿಸುವ ಮರು ಚಿಂತನೆ ನಡೆಯಬೇಕು. ವಿಜಯನಗರದ ಇತಿಹಾಸದ ಕುರಿತು ಸಂಸ್ಕ್ರತ, ಕನ್ನಡ, ತೆಲುಗು ಭಾಷೆಯಲ್ಲಿ ರಚನೆಯಾದ ಸಾಹಿತ್ಯ ಕೃತಿಗಳನ್ನು ದೇಶದ ವಿವಿಧ ಭಾಷೆಗಳಿಗೆ ಅನುವಾದಗೊಳ್ಳಬೇಕು. ವಿಜಯನಗರವನ್ನು ಆಳಿದ ನಾಲ್ಕು ವಂಶಗಳಲ್ಲಿ ಸಂಗಮ ಮತ್ತು ತುಳು ವಂಶ ಬಿಟ್ಟರೆ ಉಳಿದ ಎರಡು ವಂಶಗಳಾದ ಸಾಳುವ ಮತ್ತು ಅರವೀಡು ಮನೆತನಗಳ ಕುರಿತು ಸಮಗ್ರ ಅಧ್ಯಯನ ನಡೆಸುವ ಯೋಜನೆ ರೂಪಿಸಬೇಕು. ಇನ್ನು ವಾಣಿಜ್ಯದ ನೆಲೆಯಲ್ಲಿ ದೇಶಿ ವ್ಯಾಪಾರ, ವಿದೇಶಿ ವ್ಯಾಪಾರದ ಪುನರ್ ಮೌಲ್ಯೀಕರಣ, ಪುನರ್ ಚಿಂತನೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಇಲಾಖೆಯ ನಿರ್ದೇಶಕರಾದ ಡಾ. ಆರ್ ಶೇಜೇಶ್ವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ  ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್. ತಳಕೇರಿ, ಉಪವಿಭಾಗಾಧಿಕಾರಿ ವಿವೇಕ್, ಹೊಸಪೇಟೆಯ ತಹಸಿಲ್ದಾರ ಶೃತಿ ಮತ್ತು ಪ್ರಬಂಧ ಮಂಡಿಸುವ ಇತಿಹಾಸಕಾರರು, ಪ್ರಾಧ್ಯಪಕರು, ಸಂಶೋಧಕರು, ಮುಂತಾದವರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.