Home ಕ್ರೀಡೆ ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ
ಕ್ರೀಡೆಮನರಂಜನೆಸುದ್ದಿಗಳು

ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ

Share
Share

ವಿಜಯನಗರ:
ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವಂತೆ, ಹಂಪಿಯ ಹೊಸಮಲಪನಗುಡಿಯ ವಿದ್ಯಾರಣ್ಯ ಪೀಠದ ಮೈದಾನದಲ್ಲಿ ಶನಿವಾರ ಸಾಂಪ್ರದಾಯಿಕ ಮಣ್ಣಿನ ಕುಸ್ತಿ ಪಂದ್ಯಾವಳಿ ಪ್ರೇಕ್ಷಕರ ಮೈನವಿರೇಳಿಸಿತು.
ಸುತ್ತಲೂ ಹೂವುಗಳಿಂದ ಅಲಂಕೃತಗೊಂಡಿದ್ದ ಕೆಂಪು ಮಣ್ಣಿನ ಅಖಾಡವು ಪೈಲ್ವಾನರ ಸೆಣಸಾಟಕ್ಕೆ ಸಾಕ್ಷಿಯಾಯಿತು. ಕೇಸರಿ ಮತ್ತು ಕೆಂಪು ಬಣ್ಣದ ಲಂಗೋಟಿ ಧರಿಸಿ ಅಖಾಡಕ್ಕಿಳಿದ ಪೈಲ್ವಾನರು, ಮಣ್ಣನ್ನು ಮೈಗೆ ಹಚ್ಚಿಕೊಂಡು ಪರಸ್ಪರ ಸವಾಲು ಹಾಕಿದರು. ಮಣ್ಣಿನಲ್ಲಿ ಉರುಳಾಡುತ್ತಾ, ಒಬ್ಬರನ್ನೊಬ್ಬರು ಕೆಡವಲು ನಡೆಸಿದ ಕಸರತ್ತು ನೆರೆದಿದ್ದ ಸಹಸ್ರಾರು ಕ್ರೀಡಾಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು.
ಅಖಾಡದಲ್ಲಿ ರೆಫರಿಗಳ ತೀಕ್ಷ್ಣ ನೋಟದ ನಡುವೆ ನಡೆದ ಪಂದ್ಯದಲ್ಲಿ ಪೈಲ್ವಾನರು ತಮ್ಮ ದೈಹಿಕ ಬಲದ ಜೊತೆಗೆ ಮಾನಸಿಕ ತಂತ್ರಗಾರಿಕೆಯನ್ನು ಪ್ರದರ್ಶಿಸಿದರು. ಮೈದಾನದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಪ್ರತಿ ಪಟ್ಟುಗಳಿಗೂ ಚಪ್ಪಾಳೆ ತಟ್ಟಿ ಪೈಲ್ವಾನರನ್ನು ಪ್ರೋತ್ಸಾಹಿಸಿದರು.
ಉಸಿರು ಬಿಗಿಹಿಡಿಯುವಂತೆ ಮಾಡಿದ ‘ಗುಂಡು ಎತ್ತುವ ಸ್ಪರ್ಧೆ’: ಶಕ್ತಿ ಪ್ರದರ್ಶನದ ಕೇಂದ್ರಬಿಂದುವಾಗಿದ್ದ ಗುಂಡು ಎತ್ತುವ ಸ್ಪರ್ಧೆಯಲ್ಲಿ ಯುವಕರು ನೂರಾರು ಕೆಜಿ ತೂಕದ ಕಲ್ಲನ್ನು ಭುಜದ ಮೇಲೆ ಆಡಿಸಿ ವೀಕ್ಷಕರನ್ನು ಬೆರಗುಗೊಳಿಸಿದರು.
ಬಿಜಾಪುರದ ಶೇಖಪ್ಪ ಬಸಪ್ಪ ಅವರು 175 ಕೆಜಿ ತೂಕದ ಗುಂಡನ್ನು ಲೀಲಾಜಾಲವಾಗಿ ಎತ್ತಿ ಪ್ರಥಮ ಸ್ಥಾನ ಗಳಿಸಿದರು. ಅದೇ ಜಿಲ್ಲೆಯ ನಬಿ ನದಾಫ್ (155 ಕೆಜಿ) ದ್ವಿತೀಯ ಹಾಗೂ ರಾಯಚೂರಿನ ರಂಗಸ್ವಾಮಿ (135 ಕೆಜಿ) ತೃತೀಯ ಸ್ಥಾನ ಪಡೆದರು.
ಬಂಡಿ ಗಾಲಿ ಜೋಡಣೆ: ಕೇವಲ ಶಕ್ತಿಯಷ್ಟೇ ಅಲ್ಲದೆ, ವೇಗ ಮತ್ತು ಕೌಶಲದ ಪರೀಕ್ಷೆಯಾಗಿದ್ದ ಎತ್ತಿನಬಂಡಿ ಗಾಲಿ ಜೋಡಿಸುವ ಸ್ಪರ್ಧೆಯು ನೋಡುಗರ ಕಣ್ಣು ಮಿಟುಕದಂತೆ ಮಾಡಿತು.
ನೂರಾರು ಕೆಜಿ ತೂಕದ ಮರದ ಗಾಲಿಗಳನ್ನು ಏಕಾಂಗಿಯಾಗಿ ಜೋಡಿಸುವ ಸಾಹಸದಲ್ಲಿ ಬಡಗಿ ಶ್ರೀನಿವಾಸ ಅವರು ಪ್ರಥಮ ಸ್ಥಾನಕ್ಕೆ ಮುತ್ತಿಕ್ಕಿದರು. ಹೊಸಪೇಟೆಯ ದೇವಪ್ಪ ದ್ವಿತೀಯ ಹಾಗೂ ಬಡಗಿ ವೆಂಕೋಬ ತೃತೀಯ ಸ್ಥಾನ ಗಳಿಸಿದರು.
ಶಾಸಕ ಹೆಚ್.ಆರ್ ಗವಿಯಪ್ಪ ಅವರು ವಿಜೇತರಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಕ್ರಮವಾಗಿ ₹10,000, ₹5,000 ಹಾಗೂ ₹3,000 ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಉಪವಿಭಾಗಾಧಿಕಾರಿ ವಿವೇಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

         

ರಾಜ್ಯ ಮಟ್ಟದ ಪುರುಷ ಕುಸ್ತಿ ಪಂದ್ಯ ವಿಜೇತರು: 57 ರಿಂದ 65 ಕೆಜಿ ತೂಕದ ಕುಸ್ತಿಯಲ್ಲಿ ರಾಜ್ಯಮಟ್ಟದ ಹಂಪಿ ಕಿಶೋರ ಪ್ರಶಸ್ತಿಗೆ ವಿರೂಪಾಕ್ಷ ಪ್ರಥಮ ಸ್ಥಾನ, ಕಾರ್ತಿಕ್ ಮಾರುತಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 64 ರಿಂದ 74 ಕೆಜಿ ತೂಕದ ಕುಸ್ತಿಯಲ್ಲಿ ರಾಜ್ಯ ಮಟ್ಟದ ಹಂಪಿ ಕುಮಾರ ಪ್ರಶಸ್ತಿಗೆ ಕೆ ಸಂಜೀವನ ಪ್ರಥಮ ಸ್ಥಾನ, ಭರತ್ ಕುಡ್ಡೆಮ್ಮಿ ದ್ವಿತೀಯ ಸ್ಥಾನ.
75 ರಿಂದ 85 ಕೆಜಿ ತೂಕದ ಕುಸ್ತಿಯಲ್ಲಿ ರಾಜ್ಯ ಮಟ್ಟದ ಹಂಪಿ ಕೇಸರಿ ಪ್ರಶಸ್ತಿಗೆ ಬೀರಲಿಂಗೇಶ್ವರ ಪ್ರಥಮ ಸ್ಥಾನ, ಶಿವಾನಂದ ದ್ವಿತೀಯ ಸ್ಥಾನ. 86ಕ್ಕೂ ಮೇಲ್ಪಟ್ಟ ತೂಕದ ಕುಸ್ತಿಯಲ್ಲಿ ರಾಜ್ಯಮಟ್ಟದ ಹಂಪಿ ಕಂಠೀರವ ಪ್ರಶಸ್ತಿಗೆ ಪರಮಾನಂದ ಪ್ರಥಮ, ವಿಜಯಕುಮಾರ ಜಿ ದ್ವಿತೀಯ ಸ್ಥಾನ.

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

Homeಕ್ರೀಡೆ

ಹೊಸಪೇಟೆ : ಮೇ 30ಕ್ಕೆ ‘ಮಾಹಿತಿ ಹಕ್ಕು ಕಾಯ್ದೆ’ ಕಾರ್ಯಾಗಾರ

ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್‌ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.     

RAVICHANDRAN
Homeಕಲೆಮನರಂಜನೆ

 ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಾಯಭಾರಿ ವರ್ಣರಂಜಿತ, ವರ್ಣಾತಿತ ಕಲಾವಿದ

ದಾವಣಗೆರೆ: ಮನುಷ್ಯನಿಗೆ ನೆಮ್ಮದಿ ಕೊಡುವುದು ತಂದೆಯ ಹೆಗಲು, ನೆಮ್ಮದಿಯನ್ನು ಹೆಚ್ಚು ಮಾಡುವುದು ತಾಯಿಯ ಮಡಿಲು.  ರವಿಚಂದ್ರನ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.