Home ಶಿಕ್ಷಣ ಅಬ್ದುಲ್ ಕಲಾಂ ವಸತಿ ಶಾಲೆ ವಸತಿ ಗೃಹಕ್ಕೆ ಶಂಕುಸ್ಥಾಪನೆ
ಶಿಕ್ಷಣಸುದ್ದಿಗಳು

ಅಬ್ದುಲ್ ಕಲಾಂ ವಸತಿ ಶಾಲೆ ವಸತಿ ಗೃಹಕ್ಕೆ ಶಂಕುಸ್ಥಾಪನೆ

Share
Share

ವಿಜಯನಗರ: ನಗರದ ಹೊರವಲಯದಲ್ಲಿನ ಜಂಬುನಾಥ ರಸ್ತೆಯಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವಸತಿ ಶಾಲೆ ಸಿಬ್ಬಂದಿಗೆ ವಸತಿಗೃಹ ಕಟ್ಟಡ ನಿರ್ಮಾಣಕ್ಕೆ ಗುರುವಾರ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಭೂಮಿ ಪೂಜೆ ನೆರವೇರಿಸಿ  ಮಾತನಾಡಿದರು.
ವಸತಿ ಶಾಲೆ ಸಿಬ್ಬಂದಿಗಳಿಗಾಗಿ ಸುಮಾರು 6.33 ಕೋಟಿ ವೆಚ್ಚದಲ್ಲಿ 2 ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಒಂದು ಕಟ್ಟಡದಲ್ಲಿ 1 ಬಿಹೆಚ್‌ಕೆ ಹೊಂದಿರುವ 12 ಕೋಣೆ ಒಳಗೊಂಡ ಕಟ್ಟಡ ಮತ್ತೊಂದು ಕಟ್ಟಡದಲ್ಲಿ 2 ಬಿಹೆಚ್‌ಕೆ 12 ಕೋಣೆಗಳಿರುವ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ 7 ರಿಂದ 8 ಸಾವಿರ ಸಿಬ್ಬಂದಿ ಇದೆ. ಆದರೆ ಸುವ್ಯವಸ್ಥಿತ ಕಟ್ಟಡ ಇಲ್ಲದಿರುವ ಕಾರಣ ಬಳ್ಳಾರಿ ನಗರದಲ್ಲಿಯೇ ಉಳಿದುಕೊಂಡಿದ್ದಾರೆ. ಅವರಿಗೆ ಸುಸಜ್ಜಿತವಾದ ಸುಮಾರು 5 ರಿಂದ 6 ಸಾವಿರ ವಸತಿ ನಿಲಯಗಳ ಅವಶ್ಯಕತೆ ಇದೆ. ಅದಕ್ಕಾಗಿ ಕಳೆದ ಎರಡು ಮೂರು ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ 9 ವಸತಿ ನಿಲಯ, ಪೊಲೀಸ್ ಇಲಾಖೆಗೆ 100 ವಸತಿಗೃಹ ನಿರ್ಮಿಸಲಾಗಿದೆ. ಹೀಗೆ ಹಂತ ಹಂತವಾಗಿ ಮುಂದಿನ 5 ಅಥವಾ 10 ವರ್ಷಗಳಲ್ಲಿ ಸಿಬ್ಬಂದಿಗಳ ವಸತಿ ಗೃಹ ಸಮಸ್ಯೆ ಬಗೆಹರಿಯಲಿದೆ ಎಂದರು.
ಪ್ರಸ್ತುತ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 12ನೇ ತರಗತಿವರೆಗೆ ಒಟ್ಟು 450 ಕ್ಕೂ ಅಧಿಕ ಮಕ್ಕಳಿಗೆ ವಸತಿಯುತ ವಿದ್ಯಾಭ್ಯಾಸ ಒದಗಿಸಲಾಗುತ್ತಿದೆ. ಇಲ್ಲಿನ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ವಸತಿ ಶಾಲೆಯ ಆವರಣದಲ್ಲಿ ಹೈಮಾಸ್ಟ್ ದೀಪ ಮತ್ತು ಸಿಸಿಟಿವಿ ಅಳವಡಿಸಲು ಕ್ರಮವಹಿಸಲಾಗುವುದು.
ಇದೇ ಸಂದರ್ಭದಲ್ಲಿ ವಸತಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಆಲಿಸಿದರು. ಈ ವೇಳೆ ಕುಡಿಯುವ ನೀರಿನ ಸಮಸ್ಯೆ ಇದ್ದು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ವಿದ್ಯಾರ್ಥಿಯೊಬ್ಬರು ಮನವಿ ಮಾಡಿದರು. ಹಾಗೆಯೇ ವಸತಿ ನಿಲಯಗಳಲ್ಲಿ ಶೌಚಾಲಯ ಹದಗೆಟ್ಟಿವೆ ಎಂದು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ತಕ್ಷಣವೇ ದುರಸ್ಥಿಗೊಳಿಸುವಂತೆ ನಿರ್ದೇಶನ ನೀಡಿದರು. ಹಾಗೆಯೇ 6 ರಿಂದ 12 ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರ್ಣಗೊಂಡ ವಸತಿ ನಿಲಯ ಮತ್ತು ಭೋಧನಾ ಕೊಠಡಿಗಳನ್ನು ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಖರಂಗಿ, ಪ್ರಾಂಶುಪಾಲ ಪರಶುರಾಮ್ ಸೇರಿದಂತೆ ವಸತಿಶಾಲೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ

ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ...

Homeಶಿಕ್ಷಣ

 ಹಗರಿ ಗಜಾಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ

ಹರಪನಹಳ್ಳಿ : ಬಾಲ ಕಾರ್ಮಿಕ ಪದ್ಧತಿಯು ಸಮಾಜದ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ...

Homeಶಿಕ್ಷಣ

ಅನಂತನಹಳ್ಳಿ : ಕಾಲೇಜುಗಳಿಗೆ ಪ್ರತ್ಯೇಕ ಸಾರಿಗೆ ಬಸ್‍ ಗೆ ಆಗ್ರಹ

ಹರಪನಹಳ್ಳಿ : ತಾಲೂಕಿನ ಅನಂತನಹಳ್ಳಿಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ...

Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.