Home ಮಾರ್ಚ್ 9 ರಂದು ಭೀಮ ಗಾಯನ ಕಾರ್ಯಕ್ರಮ
Homeಸುದ್ದಿಗಳು

ಮಾರ್ಚ್ 9 ರಂದು ಭೀಮ ಗಾಯನ ಕಾರ್ಯಕ್ರಮ

Share
Share

ವಿಜಯನಗರ (ಹೊಸಪೇಟೆ) :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವತಿಯಿಂದ ಮಾರ್ಚ್ 9 ರಂದು ಮಧ್ಯಾಹ್ನ 12.30ಕ್ಕೆ ನಗರದ  ಶ್ರೀ ಶಂಕರ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ಈ. ತುಕಾರಾಂ, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ|| ಎನ್.ಟಿ .ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣ ನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ|| ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್,  ನಗರಸಬೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶರಾದ ಧನಂಜಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.