Home ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು
Homeಅಪರಾಧ

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

Share
ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು
Share

ಅಪಘಾತವೆಂದು ನಂಬಿಸಲು ಯತ್ನಿಸಿದ ಇಬ್ಬರ ಬಂಧನ

ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಆಸ್ತಿ ಪಾಲಿಗಾಗಿ ಹೆತ್ತ ಅಣ್ಣನನ್ನೇ ತಮ್ಮ ಮತ್ತು ಆತನ ಸ್ನೇಹಿತ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಇದೊಂದು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಬಣ್ಣ ಬಯಲಾಗಿದ್ದು, ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಯುವಕನನ್ನು ಹರಪನಹಳ್ಳಿ ತಾಲೂಕಿನ ಹಗರಿಶೀರನಹಳ್ಳಿ  ಗ್ರಾಮದ ಮರುಳಸಿದ್ದೇಶ (26) ಎಂದು ಗುರುತಿಸಲಾಗಿದೆ. ಈತನ ಸ್ವಂತ ತಮ್ಮ ಹಗರಿಶೀರನಹಳ್ಳಿಯ ಪತ್ರಿಗೌಡ (24) ಹಾಗೂ ಈತನ ಸ್ನೇಹಿತ ಕಡಬಗೆರೆ ಗ್ರಾಮದ ಉತ್ತಂಗಿ ನಾರಪ್ಪ (29) ಕೊಲೆಗೈದ ಆರೋಪಿಗಳು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:
ಮೃತನ ತಾಯಿ, ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ಅವರು ನೀಡಿದ ದೂರಿನನ್ವಯ, ಹಿರಿಯ ಮಗ ಮರುಳಸಿದ್ದೇಶ ಮನೆಯ ಜವಾಬ್ದಾರಿ, ಜಮೀನು ಹಾಗೂ ಟ್ರ್ಯಾಕ್ಟರ್ ನೋಡಿಕೊಳ್ಳುತ್ತಿದ್ದ. ಆದರೆ ಕಿರಿಯ ಮಗ, ಆರೋಪಿ ಪತ್ರಿಗೌಡ ತನಗೆ ಆಸ್ತಿಯಲ್ಲಿ ಪಾಲು ಬೇಕು, ಹಂಚಿಕೊಡಿ ಎಂದು ತಾಯಿ ಮತ್ತು ಅಣ್ಣನೊಂದಿಗೆ ಜಗಳವಾಡುತ್ತಿದ್ದ.

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

ಕೊಲೆಯ ಸಂಚು ಮತ್ತು ಕೃತ್ಯ:
ಮಾರ್ಚ್ 13ರಂದು ಮಧ್ಯಾಹ್ನ ಇದೇ ವಿಚಾರವಾಗಿ ಜಗಳ ತೆಗೆದಿದ್ದ ಆರೋಪಿ ಪತ್ರಿಗೌಡ, “ಪಾಲು ಕೊಡದಿದ್ದರೆ ನಾನು ದುಡಿಯಲು ಬೆಂಗಳೂರಿಗೆ ಹೋಗುತ್ತೇನೆ” ಎಂದು ಹೇಳಿ ಹೋಗಿದ್ದ. ಮೃತ ಮರುಳಸಿದ್ದೇಶನು ಉತ್ತಂಗಿ ನಾರಪನನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಮನೆ ಬಿಟ್ಟು ಹೋಗಿದ್ದ ಸಹೋದರ ಪತ್ರಿಗೌಡನನ್ನು ಹುಡುಕಾಡಲು ತೆರಳಿದ್ದ. ತಡರಾತ್ರಿ 1 ಗಂಟೆಗೆ ಹಿರೆಮೇಗಳಗೆರೆ ಸಮೀಪದ ಹೊಸಹಳ್ಳಿ ಕ್ರಾಸ್ ಬಳಿ ಬೈಕ್‍ ಅಪಘಾತವಾಗಿ ಮೃತಪಟ್ಟಿದ್ದಾರೆ ಎಂದು ದೂರದ ಸಂಬಂಧಿ ಜಯಪ್ಪ ಅವರು ಶಾಂತಮ್ಮ ಅವರಿಗೆ ತಿಳಿಸಿದ್ದಾರೆ. ಪಿರ್ಯಾದಿ ಅವರು ಕೂಡಲೇ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಿದ್ದ ಶವ ನೋಡಲಾಗಿ, ಮರುಳಸಿದ್ದೇಶನ ತಲೆ, ಎದೆ, ಮತ್ತು ಮುಖದ ಮೇಲೆ ಬಲವಾದ ಪೆಟ್ಟುಗಳಾಗಿದ್ದವು. ಆದರೆ, ಇದು ವಾಹನ ಅಪಘಾತದಿಂದ ಆದ ಗಾಯಗಳಂತೆ ಇರಲಿಲ್ಲ. ಬೈಕ್‌ನಲ್ಲಿದ್ದ ತಮ್ಮ ಮತ್ತು ಆತನ ಸ್ನೇಹಿತನಿಗೆ ಯಾವುದೇ ಸಣ್ಣ ಗಾಯವೂ ಆಗಿರಲಿಲ್ಲ. ಆಸ್ತಿ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನುವ ಅನುಮಾನದಿಂದ  ತಾಯಿ ಶಾಂತಮ್ಮ ಅರಸೀಕೆರೆ ಪೊಲೀಸರಿಗೆ ದೂರು ನೀಡಿದರು. ದೂರು ಆಧರಿಸಿ ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.