Home ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ : ಎನ್.ಜಿ.ಮನೋಹರ್  
Homeಶಿಕ್ಷಣ

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ : ಎನ್.ಜಿ.ಮನೋಹರ್  

Share
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ : ಎನ್.ಜಿ.ಮನೋಹರ್  
Share

ಹರಪನಹಳ್ಳಿ: “ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ” ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಎನ್.ಜಿ.ಮನೋಹರ್  

ತಾಲ್ಲೂಕಿನ ಅರಸೀಕೆರೆ ಗ್ರಾಮದ ಶಾಂತಪ್ರಕಾಶ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ  ಶಾಲೆಯ (2025-26ನೇ ಸಾಲಿನ) ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರ ಉದ್ಘಾಟಿಸಿ ಅವರು ಮಾತನಾಡಿದರು.

 ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳನ್ನು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅತ್ಯುತ್ತಮವಾಗಿ ರೂಪಿಸುತ್ತಿದ್ದಾರೆ. ಬಡತನದಿಂದ ಬಂದು ರಾಷ್ಟ್ರಪತಿಯಾದ ಎಪಿಜೆ ಅಬ್ದುಲ್ ಕಲಾಂ ಅವರಂತೆ ಈ ಗ್ರಾಮೀಣ ಮಕ್ಕಳು ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಾಟೀಲ್ ಆಗ್ರೋ ಏಜೆನ್ಸಿ ಮಾಲೀಕ ಪ್ರಶಾಂತ್ ಪಾಟೀಲ್ ಮಾತನಾಡಿ, “ಶಾಂತ ಪ್ರಕಾಶ ನಗರ ಶಾಲೆ ಶೈಕ್ಷಣಿಕ ಪ್ರಗತಿಯಲ್ಲಿ ತಾಲೂಕಿಗೆ 2ನೇ ಸ್ಥಾನದಲ್ಲಿದೆ. ಇದೀಗ ಆಂಗ್ಲ ಮಾಧ್ಯಮವೂ ಆರಂಭವಾಗಿದ್ದು, ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ಮುಂದಿದ್ದಾರೆ” ಎಂದರು.

ಸಾವಿತ್ರಿ ಬಾಯಿಫುಲೆ ಸಂಘದ ಜಿಲ್ಲಾಧ್ಯಕ್ಷೆ ಟಿ.ಹೆಚ್.ಎಂ.ಲತಾ ಮಾತನಾಡಿ, “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಪೋಷಕರು ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿಗೆ ಮದುವೆ ಮಾಡದೆ, ಅವರಿಗೆ ಉನ್ನತ ಶಿಕ್ಷಣ ಕೊಡಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು” ಎಂದು ಕರೆನೀಡಿದರು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬಂದವು.

ವಕೀಲ ಡಾ. ಎಂ.ಸುರೇಶ್, ಪ್ರೌಢಶಾಲೆ ಶಿಕ್ಷಕರ ಸಂಘದ  ತಾಲ್ಲೂಕು ಅಧ್ಯಕ್ಷ ಗುರುಮೂರ್ತಿ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಸಂಗಯ್ಯ, ಮುಖ್ಯ ಗುರುಗಳಾದ ಹೆಚ್.ಅನುಸೂಯಮ್ಮ, ಮುಖಂಡರಾದ ಕೆ.ಲಕ್ಷ್ಮೀ ಮಹಾಂತೇಶ್, ಐ.ಸಲಾಂ ಸಾಹೇಬ್, ಪಿ.ಹಾಲೇಶ್, ಅಡ್ಡಿ ಕೆಂಪಣ್ಣ, ಸಹ ಶಿಕ್ಷಕರಾದ ಪಿ.ಬಸವರಾಜ್, ಟಿ. ಮಮ್ತಾಜ್ ಬೇಗಂ, ಸರಸ್ವತಿ, ಟಿ.ಹೆಚ್.ಎಂ. ಉಮಾ, ಯು. ಸತೀಶ್, ಬಿ.ಸತೀಶ್, ಸುನೀತ, ಪವಿತ್ರ, ಚಾಂದಿನಿ, ಭರತ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಟಿ. ರಮೇಶ್, ಉಪಾಧ್ಯಕ್ಷೆ ಎಂ.ಗೌರಮ್ಮ, ಸರ್ವ ಸದಸ್ಯರು, ಪೋಷಕರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.