ಹೊಸಪೇಟೆ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು, ಸಾರ್ವಜನಿಕರು ಇಂಧನ ಕೊರತೆಯ ವದಂತಿಗಳಿಗೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತೈಲ ಕಂಪನಿಗಳ ಮಾಲೀಕರು ಮತ್ತು ವಿತರಕರ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಪೂರೈಕೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು, ಮುಂದಿನ ಹಲವು ದಿನಗಳಿಗೆ ಆಗುವಷ್ಟು ಸಂಗ್ರಹವಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಪ್ರಮುಖ ಸೂಚನೆಗಳು:
-
ಪ್ರದರ್ಶನ ಫಲಕ: ಪ್ರತಿಯೊಂದು ಬಂಕ್‌ಗಳಲ್ಲಿ ಲಭ್ಯವಿರುವ ಇಂಧನದ ದಾಸ್ತಾನು ವಿವರವನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು.
-
ಕಠಿಣ ಕ್ರಮ: ಕೃತಕ ಅಭಾವ ಸೃಷ್ಟಿಸುವವರು ಅಥವಾ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
-
ದೂರು ನೀಡಲು ಅವಕಾಶ: ಸಾರ್ವಜನಿಕರು ಇಂಧನ ಪೂರೈಕೆಯಲ್ಲಿ ವ್ಯತ್ಯಯ ಕಂಡಲ್ಲಿ ಅಥವಾ ದೂರುಗಳಿದ್ದಲ್ಲಿ ತಕ್ಷಣ ಪೊಲೀಸ್ ಸಹಾಯವಾಣಿ 112 ಕ್ಕೆ ಕರೆ ಮಾಡಬಹುದು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಿಯಾಜ್ ಹಾಗೂ ಜಿಲ್ಲಾ ಪೆಟ್ರೋಲಿಯಂ ವಿತರಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Leave a comment