Home ಸುದ್ದಿಗಳು ಬಳ್ಳಾರಿ ಡಿಸಿಸಿ ಬ್ಯಾಂಕ್‌ : ಹುದ್ದೆ ನೇಮಕಾತಿಗೆ ಅರ್ಜಿ ಕರೆದಿದ್ದಾರೆ
ಸುದ್ದಿಗಳು

ಬಳ್ಳಾರಿ ಡಿಸಿಸಿ ಬ್ಯಾಂಕ್‌ : ಹುದ್ದೆ ನೇಮಕಾತಿಗೆ ಅರ್ಜಿ ಕರೆದಿದ್ದಾರೆ

Share
Share

ಬಳ್ಳಾರಿ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹೊಸಪೇಟೆ (ಬಿಡಿಸಿಸಿ) ಖಾಲಿ ಇರುವ ಒಟ್ಟು 82 ವಿವಿಧ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 6, 2026 ಕೊನೆಯ ದಿನಾಂಕವಾಗಿರುತ್ತದೆ.

ಖಾಲಿ ಇರುವ ಹುದ್ದೆಗಳ ವಿವರ: ಬ್ಯಾಂಕ್‌ನಲ್ಲಿ ವಿವಿಧ ವೃಂದದ ಒಟ್ಟು 82 ಹುದ್ದೆಗಳು ಖಾಲಿ ಇವೆ.

  • ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು (FDA): 22 ಹುದ್ದೆಗಳು

  • ದ್ವಿತೀಯ ದರ್ಜೆ ಸಹಾಯಕರು (SDA): 28 ಹುದ್ದೆಗಳು

  • ವಾಹನ ಚಾಲಕರು: 1 ಹುದ್ದೆ

  • ಕಿರಿಯ ಸೇವಕರು: 31 ಹುದ್ದೆಗಳು

ಅಗತ್ಯ ವಿದ್ಯಾರ್ಹತೆ ಏನು?

ಪ್ರಥಮ ದರ್ಜೆ ಸಹಾಯಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಮತ್ತು ಕನ್ನಡ ಭಾಷೆ (ಓದು, ಬರಹ, ಮಾತು) ತಿಳಿದಿರಬೇಕು.

ದ್ವಿತೀಯ ದರ್ಜೆ ಸಹಾಯಕರು: ದ್ವಿತೀಯ ಪಿ.ಯು.ಸಿ (PUC) ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಭಾಷಾ ಜ್ಞಾನ ಕಡ್ಡಾಯ.

ವಾಹನ ಚಾಲಕರು: ಎಸ್‌ಎಸ್‌ಎಲ್‌ಸಿ (SSLC) ಯಲ್ಲಿ ಉತ್ತೀರ್ಣರಾಗಿದ್ದು, ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ (ಚಾಲನಾ ಪರವಾನಗಿ) ಹೊಂದಿರಬೇಕು.

ಕಿರಿಯ ಸೇವಕರು: ಎಸ್‌ಎಸ್‌ಎಲ್‌ಸಿ (SSLC) ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ ವಿವರ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ

  • ಸಾಮಾನ್ಯ (General) ಅಭ್ಯರ್ಥಿಗಳಿಗೆ: 35 ವರ್ಷ

  • ಹಿಂದುಳಿದ ವರ್ಗಗಳಿಗೆ (2A, 2B, 3A, 3B): 38 ವರ್ಷ

  • ಪ.ಜಾ / ಪ.ಪಂ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ: 40 ವರ್ಷ (ಸೂಚನೆ: ಸರ್ಕಾರದ ಆದೇಶದನ್ವಯ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ ).

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಇತರೆ ಪ್ರವರ್ಗ (2A, 2B, 3A, 3B) ಅಭ್ಯರ್ಥಿಗಳಿಗೆ: ₹1,000/-.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹500/-.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಲು ಪ್ರಾರಂಭ ದಿನಾಂಕ: 06.04.2026

  • ಅರ್ಜಿ ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06.05.2026

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸಬೇಕು, ಖುದ್ದಾಗಿ, ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ www.bellarydcc.bank.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.