Home ಸುದ್ದಿಗಳು ಕಲೆ ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿ
ಕಲೆಸುದ್ದಿಗಳು

ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿ

Share
Share
ವಿಜಯನಗರ:
ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು. ಶಾಸಕ  ಹೆಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಗ್ಗೊಂಡು ವಿರೂಪಾಕ್ಷೇಶ್ವರ ದೇವಾಲಯದ ಬಳಿ ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಜಾನಪದ ವಾಹಿನಿ ಕಲಾ ತಂಡಗಳ ಮೆರವಣಿಗೆ ನಾಡಿನ ಗ್ರಾಮೀಣ ಭಾಗದ ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿಯನ್ನು  ಮೆರವಣಿಗೆ ಮಾಡಲಾಯಿತು. ಹಲಗೆವಾದನ, ವೀರಗಾಸೆ, ಹಗಲುವೇಷ, ಸಿಂಧೋಳ್ ಕುಣಿತ, ನಂದಿಧ್ವಜ, ಕಹಳೆ ವಾದನ, ಹಕ್ಕಿಪಿಕ್ಕಿ ನೃತ್ಯ, ಕರಡಿ ಮೇಳ, ಪುರವಂತಿಕೆ, ಪೂಜಾ ಕುಣಿತ, ನಗಾರಿ, ಲಂಭಾಣಿ ವೃತ್ತ, ಕಂಸಾಳೆ, ಚಂಡೆವಾದ್ಯ, ಸೋಮನ ಕುಣಿತ, ಗೊರವರ ಕುಣಿತ, ಕಲಾತಂಡಗಳು‌ ಮೆರವಣಿಯಲ್ಲಿ ಪಾಲ್ಗೊಂಡಿದ್ದವು.

 
ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.