Home ಸುದ್ದಿಗಳು ಅಹಿಂದ 25ರ ಸಂಭ್ರಮ ; ಏ. 26ರಂದು ರಾಜ್ಯಮಟ್ಟದ ವಿಚಾರ ಸಂಕಿರಣ
ಸುದ್ದಿಗಳು

ಅಹಿಂದ 25ರ ಸಂಭ್ರಮ ; ಏ. 26ರಂದು ರಾಜ್ಯಮಟ್ಟದ ವಿಚಾರ ಸಂಕಿರಣ

Share
Ahinda hubballi
Share

ಹುಬ್ಬಳ್ಳಿ: ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿರುವ ‘ಅಹಿಂದ’ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಚಳುವಳಿಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ , ನಗರದಲ್ಲಿ ಬೃಹತ್ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ವಿಮಾನ ನಿಲ್ದಾಣ ರಸ್ತೆಯ ರಾಯಲ್ ರೀಟೆಜ್ ಹೋಟೆಲ್‌ನಲ್ಲಿ ‘ಅಹಿಂದ 25: ಹೋರಾಟ-ಸಾಧನೆ-ಸಂಕಲ್ಪ’ ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮ ಜರುಗಲಿದೆ.

ಶತಮಾನಗಳ ಕಾಲ ನಡೆದ ಜಾತಿ, ವರ್ಗ ಮತ್ತು ಲಿಂಗ ತಾರತಮ್ಯದ ವಿರುದ್ಧದ ಹೋರಾಟಗಳೇ ಅಹಿಂದ ಪರಿಕಲ್ಪನೆಗೆ ಐತಿಹಾಸಿಕ ಅಡಿಪಾಯವಾಗಿವೆ. ಗೌತಮ ಬುದ್ಧ, ಬಸವಣ್ಣ, ಅಂಬೇಡ್ಕರ್, ಜ್ಯೋತಿರಾವ್ ಫುಲೆ, ಪೆರಿಯಾರ್ ಹಾಗೂ ನಾರಾಯಣ ಗುರುಗಳಂತಹ ಮಹಾನ್ ಚಿಂತಕರ ತತ್ವಗಳು ಈ ಚಳುವಳಿಯ ಆಧಾರಸ್ತಂಭಗಳಾಗಿವೆ. ಮಂಟೇಸ್ವಾಮಿ, ಕನಕದಾಸ, ಶಿಶುನಾಳ ಶರೀಫ್ ಹಾಗೂ ಸೇವಾಲಾಲ್ ಅವರಂತಹ ಸಾಂಸ್ಕೃತಿಕ ನಾಯಕರು ಈ ಪ್ರತಿರೋಧದ ಪರಂಪರೆಯನ್ನು ಬಲಪಡಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

1970ರ ದಶಕದಲ್ಲಿ ಡಿ. ದೇವರಾಜ್ ಅರಸ್‌ ಅವರು ಜಾರಿಗೆ ತಂದ ಭೂ ಸುಧಾರಣೆಗಳು ಮತ್ತು ಹಿಂದುಳಿದ ವರ್ಗಗಳ ಸಬಲೀಕರಣ ನೀತಿಗಳು ಈ ಸಂಘಟನೆಗೆ ಮೊದಲ ಹಂತದ ಬಲ ನೀಡಿದವು. 1998ರ ಕೋಲಾರ ಸಮಾವೇಶದಲ್ಲಿ ‘ಅಹಿಂದ’ ಪರಿಕಲ್ಪನೆಗೆ ಮೊದಲ ಬಾರಿಗೆ ಸ್ಪಷ್ಟ ರೂಪ ಲಭಿಸಿತು.  2000ರ ದಶಕದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶವು ಈ ಸಾಮಾಜಿಕ ಚಳುವಳಿಯನ್ನು ಪ್ರಬಲ ರಾಜಕೀಯ ಶಕ್ತಿಯಾಗಿ ಪರಿವರ್ತಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಿಕಲ್ಪನೆಯನ್ನು ಜನಮಟ್ಟಕ್ಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರ ಆಡಳಿತದ ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಯೋಜನೆಗಳು ಈ ಸಿದ್ಧಾಂತದ ಪ್ರಾಯೋಗಿಕ ರೂಪಗಳಾಗಿವೆ.

ಅಹಿಂದ ಚಳುವಳಿಯು ಕೇವಲ ಹಿಂದಿನ ಸಾಧನೆಗಳ ಸ್ಮರಣೆಯಾಗಿ ಉಳಿಯಬಾರದು. ಮುಂಬರುವ ದಿನಗಳಲ್ಲಿ ಜಾತಿ ಆಧಾರಿತ ಜನಗಣತಿ, ಒಳಮೀಸಲಾತಿ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ, ಉಚಿತ ಶಿಕ್ಷಣ ಮತ್ತು ಭೂ ಹಂಚಿಕೆಯಂತಹ ಗುರಿಗಳನ್ನು ತಲುಪಲು ಹೋರಾಟ ಮುಂದುವರಿಸುವ ಅಗತ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರ ಚಿಂತಕರು, ವಿದ್ವಾಂಸರು ಹಾಗೂ ಅಹಿಂದ ಸಮುದಾಯದ ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಂಡು ಚಳುವಳಿಯನ್ನು ಮತ್ತಷ್ಟು ಗಟ್ಟಿಗೊಳಿಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.