Home ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರ ಕಡೆಗಣನೆ : ಮಂಜಮ್ಮ ಜೋಗತಿ
Homeಕಲೆಸುದ್ದಿಗಳು

ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರ ಕಡೆಗಣನೆ : ಮಂಜಮ್ಮ ಜೋಗತಿ

Share
ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರ ಕಡೆಗಣನೆ : ಮಂಜಮ್ಮ ಜೋಗತಿ
Share

ಹೊಸಪೇಟೆ (ವಿಜಯನಗರ)  : ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ  ಸ್ಥಳೀಯ ಕಲಾವಿದರು ಮತ್ತು ಸಂಘ, ಸಂಸ್ಥೆಗಳೊಂದಿಗೆ   ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಹಿಂದೆ ಹಣ, ಮೂಲಭೂತ ಸೌಲಭ್ಯಗಳು ಕಡಿಮೆ, ಆದರೆ ಉತ್ಸವ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗುತ್ತಿತ್ತು. ಇಂದು ಎಲ್ಲವೂ ಇದ್ದರೂ ಕಟ್ಟುನಿಟ್ಟಾಗಿ ಆಯೋಜನೆ ಮಾಡಲಾಗುತ್ತಿಲ್ಲ. ಸಿನಿಮಾ ತಾರೆಯರಿಗೆ, ಖ್ಯಾತ ಕಲಾವಿದರಿಗೆ ಮಾತ್ರ ಮುಖ್ಯ ವೇದಿಕೆಗೆ ಅವಕಾಶ ನೀಡಲಾಗುತ್ತದೆ. ನಮ್ಮಂತಹ ಸ್ಥಳೀಯ ಕಲಾವಿದರಿಗೆ ಕಡೆಗಣಿಸಲಾಗುತ್ತದೆ. ಈ ರೀತಿ ಭೇದ-ಭಾವ ಧೋರಣೆ ಅನುಸರಿಸದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಸಮಾನ ಅವಕಾಶ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟರು.

ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಹಂಪಿ ಉತ್ಸವ ಫೆಬ್ರವರಿ 13 ರಿಂದ 15ರ ವರೆಗೆ ನಡೆಯುತ್ತಿದ್ದು ಸಂಗೀತ, ಸಾಂಸ್ಕೃತಿಕ, ಕಲೆ, ನಾಟಕ ಹೀಗೆ ವಿವಿಧ ರೀತಿಯ ಕಲಾವಿದರಿಗೆ ಕಾರ್ಯಕ್ರಮಗಳಲ್ಲಿ ಸಮಾನ ಅವಕಾಶ ನೀಡಲಾಗುವುದು ಎಂದರು.

ಉತ್ಸವ ಕಳೆದ ಬಾರಿಗಿಂತಲೂ ವಿಶೇಷ ಮತ್ತು ವಿನೂತನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅದರಂತೆ ಸಕಲ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಆಗಾಗಿ ಎಲ್ಲಾ ಕಲಾವಿದರು, ಸಂಘ ಸಂಸ್ಥೆಗಳು ಸಾರ್ವಜನಿಕರು ಸಹಕಾರ ನೀಡಬೇಕು. ಹಂಪಿ ಉತ್ಸವ ಎಂದರೆ ಕಲಾವಿದರ ದಂಡೆ ಸೇರುತ್ತದೆ. ಆಗಾಗಿ ಇಲ್ಲಿನ ಸ್ಥಳೀಯ ಕಲಾವಿದರನ್ನ ಸಮಗ್ರವಾಗಿ ಪರಿಶೀಲಿಸಿ ಅರ್ಹ ಮತ್ತು ನೈಜ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಇದಕ್ಕೆ ತಮ್ಮೆಲ್ಲರ ಸಹಕಾರವೂ ಅತ್ಯಗತ್ಯ ಎಂದರು.

ಹಂಪಿ ಉತ್ಸವ ಲೊಗೊ

ಸರ್ಕಾರಿ ಕಟ್ಟಡಗಳಿಗೆ ಪುಷ್ಪಾಲಂಕಾರ

ವಿಶ್ವ ವಿಖ್ಯಾತ ವಿಶ್ವಪಾರಂಪರಿಕ ತಾಣವಾದ ಹಂಪಿ ಉತ್ಸವದ ಅಂಗವಾಗಿ, ಜೋಳದ ಗುಡ್ಡ, ವಿರುಪಾಕ್ಷ ದೇವಾಲಯ ಸೇರಿದಂತೆ ನಗರದಲ್ಲಿನ ಎಲ್ಲಾ ಸರ್ಕಾರಿ ಕಟ್ಟಡ, ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು. ವೈದ್ಯಕೀಯ ಹಾಗೂ ನೈರ್ಮಲ್ಯತೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಸಂಘದ ಸದಸ್ಯರೊಬ್ಬರು ಆಗ್ರಹಿಸಿದರು.

ವಿಶೇಷ ಚೇತನರಿಗೂ ಅವಕಾಶ ನೀಡಿ

ಉತ್ಸವದಲ್ಲಿ ಅಂಧ, ವಿಕಲಾಂಗ, ವಿಶೇಷ ಚೇತನರಿಗೆ ಪಾರ್ಕಿಂಗ್ ವ್ಯವಸ್ಥೆಯೇ ಕಗ್ಗಂಟಾಗಿ ಪರಿಣಮಿಸಿದೆ. ಮುಖ್ಯ ವೇದಿಕೆಗೂ ಪಾರ್ಕಿಂಗ್ ಸ್ಥಳಕ್ಕೂ ಅಜಗಜಾಂತರ ದೂರವಿದ್ದು, ಸಾರಿಗೆ ಸೌಲಭ್ಯ, ಪಾಸ್ ವ್ಯವಸ್ಥೆಯಿಲ್ಲದೇ ಮುಖ್ಯ ವೇದಿಕೆ ಬಳಿ ತೆರಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವಿಜಯನಗರ ಸಾಮ್ರಾಜ್ಯ ಗತವೈಭವ ಸಾರುವ ಹಂಪಿ ಉತ್ಸವ ನೋಡಲಾಗುತ್ತಿಲ್ಲ. ಕೇಳಲಾಗುತ್ತಿಲ್ಲ. ಇದನ್ನು ವಿಶೇಷವಾಗಿ ಗಮನದಲ್ಲಿಟ್ಟುಕೊಂಡು ಅಂತಹವರಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಲ್ಲಲ್ಲಿ ಎಲ್‌ಇಡಿ ಪರದೆ ಅಳವಡಿಸಬೇಕು. ಹಾಗೆಯೇ ವಿಶೇಷ ಚೇತನ, ಮತ್ತು ಅಂಧ ಕಲಾವಿದರಿಗೂ ಹಂಪಿ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು.

hosapete

ಕಲಾವಿದರಿಗೆ ಮುಂಗಡ ಹಣ ಪಾವತಿಸಲು ಒತ್ತಾಯ

ಸಭೆಯಲ್ಲಿ ಭಾಗವಹಿಸಿದ ಕಲಾವಿದರೊಬ್ಬರು ಮಾತನಾಡಿ, ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಮುಂಗಡವಾಗಿ ಇಂತಿಷ್ಟು ಹಣ ಪಾವತಿಸಿದಲ್ಲಿ ಬಡ ಕಲಾವಿದರಿಗೆ ಸಹಾಯವಾಗಲಿದೆ ಎಂದು ಕೇಳಿಕೊಂಡರು, ಇದಕ್ಕೆ ಪ್ರತಿಕ್ರಿಯಸಿದ ಜಿಲ್ಲಾಧಿಕಾರಿ ಉತ್ಸವಕ್ಕಾಗಿ ಸರ್ಕಾರಕ್ಕೆ ರೂ. 22  ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತುತ ಅನುದಾನ ಕೊರೆತೆಯಿದೆ. ಆಗಾಗಿ ಕಲಾವಿದರಿಗೆ ಮುಂಗಡವಾಗಿ ಹಣ ಸಂದಾಯ ಮಾಡಲಾಗುವುದಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದ ನಂತರ ಸಂಪೂರ್ಣವಾಗಿ ಏಕ ಕಂತಿನಲ್ಲಿ ಸಂಭಾವನೆ ಪಾವತಿಸಲಾಗುವುದು ಎಂದು ತಿಳಿಸಿದರು.

ಮತ್ತೊಬ್ಬ ಕಲಾವಿದರು ಮಾತನಾಡಿ, ಹಂಪಿ ಉತ್ಸವ ಆರಂಭವಾದಗಿನಿಂದಲೂ ಎಲ್ಲಾ ರೀತಿಯ ಕಲೆ ಪ್ರದರ್ಶನಕ್ಕೆ ಅನುಮತಿ ನೀಡಲಾಗಿದೆ. ಆದರೆ ಇತ್ತೀಚೆಗೆ ನಮ್ಮ ಭಾರತೀಯ  ಶಾಸ್ತ್ರೀಯ ಸಂಗೀತ ಹಾಗೂ ನಶಿಸಿ ಹೋಗುತ್ತಿರುವ ತೊಗಲು ಗೊಂಬೆಯಾಟ, ಸೂತ್ರ ಗೊಂಬೆಯಾಟ ಹೀಗೆ ದೇಶಿಯ ಸಂಸ್ಕೃತಿ ಒಳಗೊಂಡ ಕಲೆಗಳಿಗೂ ಸಹ ಪ್ರತ್ಯೇಕ ವೇದಿಕೆ ಕಲ್ಪಿಸಬೇಕು. ಹಂಪಿ ಉತ್ಸವಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಸಾವಯವ ಕೃಷಿ, ದವಸ ಧಾನ್ಯ ಪ್ರದರ್ಶನ ಮಾಡಬೇಕು. ಅದಷ್ಟೇ ಅಲ್ಲದೇ ಈ ಕುರಿತು ವಿಶೇಷ ಉಪನ್ಯಾಸ ಆಯೋಜಿಸಬೇಕು.

ಹೀಗೆ ವಿವಿಧ ರೀತಿಯ ಬೇಡಿಕೆ, ಮನವಿಗಳನ್ನು ನೆರೆದಿದ್ದ ಕಲಾವಿದರು ಒಂದೊಂದು ರೀತಿಯಲ್ಲಿ ಅಧಿಕಾರಿಗಳ ಮುಂದೆ ಭಿನ್ನವಿಸಿಕೊಂಡರು. ಈ ಎಲ್ಲಾ ಅಂಶಗಳನ್ನು ಆಲಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಸರ್ಕಾರದ ನಿಯಮಾನುಸಾರ, ಪರಿಮಿತಿಯೊಳಗೆ ಉತ್ಸವ ನಡೆಸಲಾಗುವುದು. ಆದರೂ ಸಾಧ್ಯವಾದಷ್ಟು ತಮ್ಮ ಸಲಹೆ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಮತ್ತು ಸಕಲ ರೀತಿಯಲ್ಲೂ ಉತ್ತಮವಾಗಿ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಜಿ.ಪಂ. ಸಿಇಓ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.