Home ಸುದ್ದಿಗಳು ಅಂಬೇಡ್ಕರ ಪರಿನಿರ್ವಾಣ ಆಚರಣೆ ನಿರ್ಲಕ್ಷ್ಯ : ಕೆ.ಸುಭಾಷ್
ಸುದ್ದಿಗಳು

ಅಂಬೇಡ್ಕರ ಪರಿನಿರ್ವಾಣ ಆಚರಣೆ ನಿರ್ಲಕ್ಷ್ಯ : ಕೆ.ಸುಭಾಷ್

Share
ದಲಿತ ಸಂಘರ್ಷ ಸಮಿತಿ,ಭೀಮವಾದ ಹರಪನಹಳ್ಳಿ.
Share

 ಹರಪನಹಳ್ಳಿ : ‌ ಪರಿನಿರ್ವಾಣ ದಿನ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ ಅವರ ಭಾವಚಿತ್ರವಿಟ್ಟು ಪೂಜಿಸಬೇಕು ಎಂದು ತಹಶೀಲ್ದಾರ ಅವರು ಡಿ.4ರಂದೇ ಆದೇಶ ಮಾಡಿದ್ದಾರೆ. ಆದರೆ ಪರಿನಿರ್ವಾಣ ಆಚರಣೆ ನಿರ್ಲಕ್ಷಿಸಿರುವ ಶಾಲಾ ಶಿಕ್ಷಣ ಇಲಾಖೆ ಬಿಇಒ ಲೇಪಾಕ್ಷಪ್ಪ ಅವರ ವಿರುದ್ಧ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಧಿಕಾರಿಗಳು ಶಿಸ್ತು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಆಗ್ರಹಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬೇಟಿಕೊಟ್ಟಿದ್ದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಹಾರಿಕೆ ಉತ್ತರ ಕೊಟ್ಟಿದ್ದಾರೆ. ಇದನ್ನು ಖಂಡಿಸಿದ ಪದಾಧಿಕಾರಿಗಳು ಪರಿನಿರ್ವಾಣ ಆಚರಿಸುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ದೂರಿದರು.

ಕೃಷಿ ಇಲಾಖೆ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿ ಆಚರಣೆ ಮಾಡಿ, ವರದಿ ಸಲ್ಲಿಸದ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ಅವರು ಅಂಬೇಡ್ಕರ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಅಚಾತುರ್ಯದಿಂದ ಪರಿನಿರ್ವಾಣ ಆಚರಣೆ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲಾಗುವುದು, ವಿಳಂಬ ಆಗಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ಬಳಿಕ ಸಂಘಟಕರು ಪ್ರತಿಭಟನೆ ಹಿಂಪಡೆದು, ಅಲ್ಲಿಂದ ತೆರಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ ಸರ್ಕಲ್‌ ನಲ್ಲಿ ಆಚರಣೆ

ದಲಿತ ಸಂಘರ್ಷ ಸಮಿತಿ(ಭೀಮವಾದ)ದಿಂದ ಆಚರಿಸಿದ 69ನೇ ಪರಿನಿರ್ವಾಣ  ಆಚರಣೆಯಲ್ಲಿ ಸಹಾಯಕ ನಿರ್ದೇಶಕ ಎಸ್.ಆರ್.ಗಂಗಪ್ಪ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ನಿಲಯ ಮೇಲ್ವಿಚಾರಕ ಎನ್.ಜಿ.ಬಸವರಾಜ್, ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್, ಛತ್ರಪತಿ, ಬಿದ್ದಾಡಿ ನಾಗರಾಜ್, ಜಯರಾಜ್, ಭರತ್, ಶ್ರೀಕಾಂತ, ರಮೇಶ್,ಕೋಟೆಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.