ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಟಿ.ಅಂಬಿಕಾ ತಂದೆ ಮಲ್ಲಯ್ಯ (ಸು.23 ವರ್ಷ) ಯುವತಿ ಕಾಣೆಯಾಗಿದ್ದು, ಈ ಕುರಿತು ಸೆಪ್ಟೆಂಬರ್ 9 ರಂದು ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ಸುಮಾರು 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಪಿಂಕ್ ಕಲರ್ ಪ್ರಾಕ್ ಮತ್ತು ಪ್ಯಾಂಟ್ ಧರಿಸಿರುತ್ತಾರೆ. ಈ ಮೇಲ್ಕಂಡ ಯುವತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಹೊಸಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ
Leave a comment