ವಿಜಯನಗರ(ಹೊಸಪೇಟೆ)(ಕರ್ನಾಟಕ ವಾರ್ತೆ)ಜೂ.6:
ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2, 3ಎ ಹಾಗೂ 3ಬಿ ಅಭ್ಯರ್ಥಿಗಳಿಂದ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.
ತರಬೇತಿ ಪಡೆಯಬಯಸುವ ಅಭ್ಯರ್ಥಿಗಳು ಜಿಲ್ಲೆಯವರಾಗಿದ್ದು, 38 ವರ್ಷ ವಯೋಮಿತಿ ಮೀರಿರಬಾರದು. ಪ್ರವರ್ಗ-1ರ ಅಭ್ಯರ್ಥಿಗಳ ವಾರ್ಷಿಕ ಆದಾಯ 3.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ವಾರ್ಷಿಕ ಆದಾಯರೂ.2.5 ಲಕ್ಷ ಮಿತಿ ಹೊಂದಿರಬೇಕು. ಕಾನೂನು ತರಬೇತಿಯು ನಾಲ್ಕು ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ಮಾತ್ರ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 2 ವರ್ಷದ ಕಾನೂನು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಬಾರ್ ಕೌನ್ಸಿಲ್ ನಲ್ಲಿ ಹೆಸರು ನೋಂದಾಯಿಸಿರಬೇಕು. ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್‌ಎಸ್‌ಎಲ್‌ಸಿ, ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಎಸ್ ಪಿ ಕಚೇರಿ ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಬೇಟಿ ನೀಡಬಹುದು ಅಥವಾ ದೂ.ಸಂ: 08394-223518 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
ವಿಜಯನಗರ(ಹೊಸಪೇಟೆ)(ಕರ್ನಾಟಕ ವಾರ್ತೆ)ಜೂ.06:
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಬಾಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 6 ರಿಂದ 10ನೇ ತರಗತಿಗೆ ಹಾಗೂ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ, ಡಿಪ್ಲೊಮ, ಐಟಿಐ ಕೋರ್ಸ್ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ರ್ಪೂ ವಿದ್ಯಾರ್ಥಿಗಳಿಗೆ ಜೂನ್ 15 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯ ಜಾಲತಾಣ http://shp.karnataka.gov.in ನಲ್
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://dom.karnataka.gov.in
ಜೂನ್ 9ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಸಭೆ
ವಿಜಯನಗರ(ಹೊಸಪೇಟೆ)(ಕರ್ನಾಟಕ ವಾರ್ತೆ)ಜೂ.6:
ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹರಪನಹಳ್ಳಿ ರಸ್ತೆಯಲ್ಲಿನ ಎಸ್‌ಆರ್‌ಎಂಪಿಪಿ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಇದೇ ಜೂನ್ 9ರಂದು ಬೆಳಗ್ಗೆ 11ಗಂಟೆಗೆ ಬಳ್ಳಾರಿ ಸಂಸದ ಈ.ತುಕಾರಾಂ ಅವರ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ ಆಯೋಜಿಸಲಾಗಿದೆ. ಸಭೆ ಆರಂಭಕ್ಕೂ ಮುನ್ನ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಹಡಗಲಿ ಪಟ್ಟಣದ ಪ್ರವಾಸಿ ಮಂದಿರ ಮುಂಭಾಗದಲ್ಲಿ ಸಾರ್ವಜನಿಕರಿಂದ ಅಹ್ವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸಿಇಓ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ತಿಳಿಸಿದ್ದಾರೆ.
Leave a comment