Home ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ
Homeಸುದ್ದಿಗಳು

ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ

Share
ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ
Share

ಹರಪನಹಳ್ಳಿ : ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಸಂಘಟಿತವಾಗಿ ಒಗ್ಗಟ್ಟು ಕಾಪಾಡಿಕೊಳ್ಳಬೇಕಾಗಿದೆ ಎಂದು ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ತಿಳಿಸಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಒಳಗಿನ ಮಠದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹರಿಹರ ಪಂಚಮಸಾಲಿ ಪೀಠದಲ್ಲಿ ಜ.15ರಂದು ಮಕರ ಸಂಕ್ರಾಂತಿ ನಿಮಿತ್ತ 8ನೇ ಹರಜಾತ್ರೆ ಆಯೋಜಿಸಲಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಹರಜಾತ್ರೆ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು. ಪೀಠಕ್ಕೆ ಪಂಚಮಸಾಲಿ ಸಮಾಜ ಬೆನ್ನೆಲುಬಾಗಿದೆ. ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಉಚಿತ ಹಾಸ್ಟಡೆಲ್ ವ್ಯವಸ್ಥೆ, ವಸತಿ ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ. ಆಗಸ್ಟ್  ತಿಂಗಳಲ್ಲಿ ವಧು-ವರ ಸಮಾವೇಶಕ್ಕೆ ಸಿದ್ದತೆ ನಡೆದಿದೆ ಎಂದು ಹೇಳಿದರು.

ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ

ತಾಲ್ಲೂಕು ಅಧ್ಯಕ್ಷ ಬೆಟ್ಟನಗೌಡ ಮಾತನಾಡಿ, ಪಂಚಮಸಾಲಿ ಪೀಠ ಸ್ಥಾಪನೆಗೆ ಹರಪನಹಳ್ಳಿ ತಾಲ್ಲೂಕಿನ ಪಂಚಮಸಾಲಿ ಸಮಾಜ ಬಹುದೊಡ್ಡ ಕೊಡುಗೆ ನೀಡಿದೆ. ಹರ ಜಾತ್ರೆಗೂ ಹೆಚ್ಚಿನ ಸಂಖ್ಯೆ ಜನರು ಭಾಗವಹಿಸುವುದಾಗಿ ತಿಳಿಸಿದರು. ಯುವ ಘಟಕದ  ರಾಜ್ಯಾಧ್ಯಕ್ಷ ಕಿಚಡಿ ಕೊಟ್ರೇಶ್, ಸಮಾಜದ ಮುಖಂಡ ಪ್ರಶಾಂತ್ ಪಾಟಿಲ್ ಮಾತನಾಡಿದರು. ಮುಖಂಡರಾದ ಎ.ಹೆಚ್.ಪಂಪಣ್ಣ, ಎ.ಜಿ.ಮಂಜುನಾಥ್, ತೌಡೂರು ಚನ್ನಬಸವನ ಗೌಡ್ರು, ವಿರೂಪಾಕ್ಷಪ್ಪ,ಮಹೇಶ್ ಪೂಜಾರಿ,ಸುರೇಶ್, ಚನ್ನನಗೌಡ್ರು, ಮಹಿಳಾ ಅಧ್ಯಕ್ಷ ಶ್ರೀಮತಿ, ದೀಪಾ, ಕೊಟ್ರಮ್ಮ, ಇಟ್ಟಿಗಿಹಳ್ಳಿ ಬಸವರಾಜ್, ಅಡ್ಡಿ ಚನ್ನವೀರಪ್ಪ, ಅಜಯ್ ಕುಮಾರ್,ಪುಣಭಘಟ್ಟ ಚನ್ನಬಸಪ್ಪ, ಯರಬಳ್ಳಿ ಜಾತಪ್ಪ,ಸಮಾಜದ ಎಲ್ಲಾ ಮುಖಂಡರು ಹಾಗೂ ಮಹಿಳೆಯರು ಹಾಜರಿದ್ದರು.

“ನಮ್ಮ ಸಮಾಜದ ಸಂಘಟನೆಯ ಹಿತದೃಷ್ಟಿಯಿಂದ ಆರಂಭವಾಗಿರುವ ಹರಜಾತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಬೆಂಬಲ ಸೂಚಿಸುತ್ತೇವೆ. ನಮ್ಮ ಸಮಾಜದ ಮಠವನ್ನು ಎತ್ತರಕ್ಕೆ ಬೆಳೆಸಿದ ಶ್ರೀಗಳ ಕಾರ್ಯ ನಮಗೆಲ್ಲಾ ಸ್ಪೂರ್ತಿಯಾಗಿದೆ.”

ಪ್ರಶಾಂತ್ ಪಾಟೀಲ್, ಸಮಾಜದ ಮುಖಂಡರು, ಅರಸೀಕೆರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.