Home ಸುದ್ದಿಗಳು  ಅರಸೀಕೆರೆ : ಗ್ರಾಮೀಣ ಬ್ಯಾಂಕ್‌ ನಲ್ಲಿ ಹಣಕ್ಕಾಗಿ ಪರದಾಟ
ಸುದ್ದಿಗಳು

 ಅರಸೀಕೆರೆ : ಗ್ರಾಮೀಣ ಬ್ಯಾಂಕ್‌ ನಲ್ಲಿ ಹಣಕ್ಕಾಗಿ ಪರದಾಟ

Share
ಕರ್ನಾಟಕ ಗ್ರಾಮೀಣ ಬ್ಯಾಂಕ್‌, ಅರಸೀಕೆರೆ
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ದಂಡಿನ ದುರುಗಮ್ಮ ದೇವಿ ಜಾತ್ರೆಯ ಖರ್ಚಿಗಾಗಿ ತಮ್ಮ ಖಾತೆಯಿಂದ ಹಣ ಪಡೆಯಲು ಬರುವ ಗ್ರಾಹಕರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಸಕಾಲಕ್ಕೆ ಒದಗಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಹತ್ತು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ 15 ಸಾವಿರ  ಖಾತೆದಾರರನ್ನು ಹೊಂದಿದೆ. ಇದರ ವ್ಯಾಪ್ತಿಗೆ 4 ಗ್ರಾಮ ಪಂಚಾಯಿತಿಗಳು ಒಳಪಟ್ಟಿವೆ. ಉದ್ಯೋಗ ಖಾತ್ರಿ ಫಲಾನುಭವಿಗಳು, ಖಾತೆದಾರರು, ಬ್ಯಾಂಕಿನಲ್ಲಿ ಸಾಲ ಪಡೆಯುವ ರೈತರು, ಗ್ರಾಹಕರು, ಬಂಗಾರ ಅಡವಿಡುವ ಗ್ರಾಹಕರು ಬ್ಯಾಂಕ್‌ ಗೆ ಬರುತ್ತಾರೆ. ಆದರೆ ಸಕಾಲಕ್ಕೆ ಅಧಿಕಾರಿಗಳು ಹಣ ಒದಗಿಸುತ್ತಿಲ್ಲ. ದಿನವೊಂದಕ್ಕೆ ಕೇವಲ 50 ಲಕ್ಷ ವ್ಯವಹರಿಸಿ, ವಹಿವಾಟು ನಿಲ್ಲಿಸಿ ಬಿಡುತ್ತಾರೆ. ಬ್ಯಾಂಕ್‌ ವ್ಯಾಪ್ತಿಗೆ 40 ಹಳ್ಳಿಗಳು ಒಳಪಡುತ್ತವೆ. ನಿತ್ಯ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹಣವಿಲ್ಲದೇ ನಿರಾಸೆಯಿಂದ ವಾಪಾಸು ಹೋಗುತ್ತಿದ್ದಾರೆ. ಬ್ಯಾಂಕ್‌ ನಲ್ಲಿ ಹೆಚ್ಚುವರಿ ಕೌಂಟರ್‌ ತೆರೆಯಬೇಕು ಇಲ್ಲದಿದ್ದರೆ ಬ್ಯಾಂಕ್‌ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್‌ ಎಚ್ಚರಿಸಿದ್ದಾರೆ. ಗ್ರಾಹಕರಾದ ಹನುಮಂತಪ್ಪ, ರತ್ನಮ್ಮ, ಮಲ್ಲಪ್ಪ,ಮಹೇಶ್‌ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.