Home ಅಪರಾಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  
ಅಪರಾಧಸುದ್ದಿಗಳು

ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  

Share
ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
Share

ಅರಸೀಕೆರೆ (ಹರಪನಹಳ್ಳಿ) : ತಾಲೂಕಿನ ಅರಸೀಕೆರೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಭಾನುವಾರ ಅರಸೀಕೆರೆ ಹೋಬಳಿಯ ಹಳ್ಳಿಗಳ ಸಾರ್ವಜನಿಕರ ಸಭೆ ಜರುಗಿತು.

ಸಿಪಿಐ ಮಹಾಂತೇಶ್ ಸಜ್ಜನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹಬ್ಬ-ಹರಿದಿನಗಳಲ್ಲಿ ಕುಡಿತಕ್ಕೆ ಹಾಗೂ ಡಿಜೆ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ಗಮನಕ್ಕೆ ಬಂದಿದೆ.  ಹಿಂದಿನ ದಿನಗಳಲ್ಲಿ ಪ್ರತಿಯೊಂದು ಹಬ್ಬವನ್ನು ಹಿರಿಯರ ಮಾರ್ಗದರ್ಶನದಲ್ಲಿ ಶಾಂತಿಯುತವಾಗಿ ಆಚರಿಸಲಾಗುತ್ತಿತ್ತು ಎಂದು ಅವರು ತಿಳಿಸಿದರು.

ಅರಸೀಕೆರೆ ಹಾಗೂ ಅರಸೀಕೆರೆ ಹೋಬಳಿಯಲ್ಲಿ ಹಿಂದೂ–ಮುಸ್ಲಿಂ ಸೇರಿದಂತೆ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ವಿಶೇಷ. ಮುಂದೆಯೂ ಇದೇ ರೀತಿಯಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪಿಎಸ್‌ಐ ವಿಜಯ್ ಕೃಷ್ಣ, ಮುಖಂಡರಾದ ಪೂಜಾರ್ ಮರಿಯಪ್ಪ, ಜಾಮಿಯಾ ಮಸೀದಿ ಅಧ್ಯಕ್ಷ ಅಬೀಬ್ ಸಾಹೇಬ್, ಕಾರ್ಯದರ್ಶಿ ಖಾಜಿ ಮಹಮ್ಮದ್ ಸಾಹೇಬ್, ಐ. ಸಲಾಂ ಸಾಹೇಬ್, ಕೆ. ಮಹಾಂತೇಶ್, ಅಜೀಮ್ ಸಾಹೇಬ್, ದಸ್ತಗಿರಿ ಸಾಹೇಬ್, ರಹಮ್ಮತ್ ಉಲ್ಲಾ ಸಾಹೇಬ್, ಹೆಚ್. ನವೀನ್, ಅಬ್ದುಲ್ ಸಾಹೇಬ್ ಸೇರಿದಂತೆ ಮಾದಿಹಳ್ಳಿ ಉಚ್ಚಂಗಿದುರ್ಗ, ಹನುಮನಹಳ್ಳಿ, ಜಂಬುಲಿಂಗನಹಳ್ಳಿ, ಕಂಚಿಕೆರೆ ಹಾಗೂ ಅರಸೀಕೆರೆ ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಸಿಬ್ಬಂದಿ ಕೂಲಹಳ್ಳಿ ಎಂ. ಕೊಟ್ರೇಶ್, ರವಿನಾಯ್ಕ್, ಪೂರ್ಯನಾಯ್ಕ್, ರವಿಕುಮಾರ್, ಗುರುರಾಜ್, ಹರೀಶ್, ಗೂರ್ಯನಾಯ್ಕ್, ವೀರಮ್ಮ ಹಾಗೂ ಕೊಟ್ರಮ್ಮ ಶಾಂತಿ ಸಭೆಯಲ್ಲಿ ಉಪಸ್ಥಿತರಿದ್ದರು.

 ವರದಿ : ಮಹೇಶ್‌ ಅರಸೀಕೆರೆ

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.