Home ಸುದ್ದಿಗಳು ಅರಸೀಕೆರೆ : ಬಿಡಿಸಿಸಿ ಬ್ಯಾಂಕ್‌ 106ನೇ ಸಂಸ್ಥಾಪನೆ ದಿನ
ಸುದ್ದಿಗಳು

ಅರಸೀಕೆರೆ : ಬಿಡಿಸಿಸಿ ಬ್ಯಾಂಕ್‌ 106ನೇ ಸಂಸ್ಥಾಪನೆ ದಿನ

Share
ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಬಿಡಿಸಿಸಿ ಬ್ಯಾಂಕ್‌
Share

ಹರಪನಹಳ್ಳಿ : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍  ರೈತರು, ಗ್ರಾಹಕರಿಗೆ ಆರ್ಥಿಕ ಪ್ರಗತಿಗೆ ಸಹಕಾರಿ ಆಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಹೇಳಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮದ ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ  ಆಯೋಜಿಸಿದ್ದ ಬಿಡಿಸಿಸಿ ಬ್ಯಾಂಕ್ 106ನೇ ವರ್ಷದ ಸಂಸ್ಥಾಪನೆ ದಿನಾಚರಣೆ ಸಂಭ್ರಮಾಚರಣೆಯಲ್ಲಿ ಕೇಕ್ ಕತ್ತರಿಸಿ ಚಾಲನೆ ನೀಡಿ ಅವರು ಮಾತನಾಡಿದರು. ಬಿಡಿಸಿಸಿ ಬ್ಯಾಂಕ್‍ ನಿಂದ ಸಾವಿರಾರು ಜನರಿಗೆ ಅನುಕೂಲವಾಗಿದೆ. ಸಾಲ ಪಡೆದ ಗ್ರಾಹಕರು ಸಕಾಲಕ್ಕೆ ಮರುಪಾವತಿಸಿದರೆ, ತಮ್ಮ ಏಳ್ಗೆ ಮತ್ತು ಬ್ಯಾಂಕ್ ಏಳ್ಗೆ ಎರಡು ಸಮವಾಗಿ ಬೆಳೆಯುತ್ತವೆ ಎಂದು ಹೇಳಿದರು.

ಬ್ಯಾಂಕ್ ವ್ಯವಸ್ಥಾಪಕ ನಿರಂಜನ್ ಮಾತನಾಡಿ, ಅರಸೀಕೆರೆ ಶಾಖೆಯಿಂದ ಕೃಷಿ ಸಾಲ 37 ಕೋಟಿ, ಕೃಷಿಯೇತರ ಸಾಲ 10 ಕೋಟಿ ಒಟ್ಟು ರೂ.47 ಕೋಟಿ ಸಾಲ ಗ್ರಾಹಕರಿಗೆ ವಿತರಿಸಲಾಗಿದೆ. 2025 ಮಾರ್ಚ್ ಅಂತ್ಯಕ್ಕೆ ಶಾಖೆಯು ಒಟ್ಟು ₹ 2.36 ಕೋಟಿ ಲಾಭಗಳಿಸಿದೆ ಎಂದು ತಿಳಿಸಿದರು. ಮುಖಂಡರಾದ ಪ್ರಶಾಂತ ಪಾಟೀಲ್, ಪೂಜಾರ ಮರಿಯಪ್ಪ, ಕ್ಷೇತ್ರಾಧಿಕಾರಿ ಕೆ.ಎನ್.ಬಸವರಾಜ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.