Home ಸುದ್ದಿಗಳು ಅರಸೀಕೆರೆ : ದಂಡಿನ ದುರುಗಮ್ಮ ಜಾತ್ರೆ ಡಿ.19 ರಿಂದ ಆರಂಭ
ಸುದ್ದಿಗಳು

ಅರಸೀಕೆರೆ : ದಂಡಿನ ದುರುಗಮ್ಮ ಜಾತ್ರೆ ಡಿ.19 ರಿಂದ ಆರಂಭ

Share
ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ದಂಡಿನ ದುರುಗಮ್ಮದೇವಿ ಜಾತ್ರೆ
Share

 ಹರಪನಹಳ್ಳಿ : ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ದಲಿತರು ಹೊಂದಿರುವ ಇತಿಹಾಸ ಪ್ರಸಿದ್ದ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ದಂಡಿನ ದುರುಗಮ್ಮ ದೇವಿ ಜಾತ್ರೆ ಡಿ.19ರ ಶುಕ್ರವಾರ ಆರಂಭಗೊಂಡು  ಡಿ.21ರ ಭಾನುವಾರ ಮುಕ್ತಾಯಗೊಳ್ಳಲಿದೆ.

ದೇವಸ್ಥಾನಕ್ಕೆ ಸುಣ್ಣಬಣ್ಣ, ವಿದ್ಯುತ್ ದೀಪಾಲಂಕಾರದ ಸಿದ್ಧತೆಗಳು ಭರದಿಂದ ಸಾಗಿವೆ. ಜಾತ್ರೆಯು ಯಶಸ್ವಿಯಾಗಲು ಮುಂಜಾಗ್ರತವಾಗಿ ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕರೆದಿದ್ದ ಶಾಂತಿಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಹಲವು ನಿರ್ಣಯ ಕೈಗೊಳ್ಳಲಾಯಿತು. ಸಿಪಿಐ ಸಿಪಿಐ ಮಹಾಂತೇಶ್ ಜಿ.ಸಜ್ಜನ್ ಮಾತನಾಡಿ,  ದಂಡಿನ ದುರುಗಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಅಹಿತಕರ ಘಟನೆಗೆ ಅವಕಾಶ ಕೊಡದೇ, ಶಾಂತರೀತಿಯಿಂದ ಹಬ್ಬವನ್ನು ಆಚರಿಸಿ. ಜಾತ್ರೆ ನಿಮಿತ್ತ 70ಕ್ಕೂ ಪೊಲೀಸ್ ಸಿಬ್ಬಂದಿ ಜಾತ್ರೆಗೆ ನಿಯೋಜಿಸಲಾಗುವುದು ಎಂದು ಹೇಳಿದರು.

ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕೆ.ಮಾರುತೇಶ್ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಚತೆ, ವಿದ್ಯುತ್ ವ್ಯವಸ್ಥೆಗೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಗ್ರಾಮದ ಮುಖಂಡ ಪ್ರಶಾಂತ ಪಾಟೀಲ್ ಮಾತನಾಡಿ, ಜಾತ್ರೆ ನಿಮಿತ್ತ ಎಲ್ಲೆಡೆಗೆ ಸ್ವಚ್ಚತೆಗೆ ಆಧ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಪಿಎಸ್ಐ ವಿಜಯಕೃಷ್ಣ, ದಲಿತ ಮುಖಂಡ ಪೂಜಾರ ಮರಿಯಪ್ಪ, ಕೆ.ಆನಂದಪ್ಪ, ಐ.ಸಲಾಂ ಸಾಬ್ ಮಾತನಾಡಿದರು.  ಕಂದಾಯ ನಿರೀಕ್ಷಕ ನಾನ್ಯಸಾಹೇಬ್, ವೈದ್ಯ ಡಾ.ವೆಂಕಟೇಶ್, ಕಾರ್ಯದರ್ಶಿ ಶಿವಲೀಲಾ,  ಮೈಲಾರಿ, ಆದಮ್ ಸಾಹೇಬ್, ಅಡ್ಡಿ ಚನ್ನವೀರಪ್ಪ, ಕೆ.ಮಹಾಂತೇಶ, ಎಂ.ಚಂದ್ರಪ್ಪ, ವೈ.ಕೊಟ್ರೇಶ್, ಬಿ.ಲಕ್ಷ್ಮಣ, ಅಬೀಬ್ ಸಾಬ್, ಎ.ಎಚ್.ಕೊಟ್ರೇಶ್, ಲಕ್ಷ್ಮಿ ನಾರಾಯಣ ಶೆಟ್ರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.