Home ಅರಸೀಕೆರೆ : ಪೊಲೀಸರಿಂದ ಜಾಗೃತಿ
Home

ಅರಸೀಕೆರೆ : ಪೊಲೀಸರಿಂದ ಜಾಗೃತಿ

Share
ARSKIKERE,POLICE,PROGRAMME
Share

ಹರಪನಹಳ್ಳಿ : ಶಾಲಾ ಕಾಲೇಜಿನ ಹಂತದ ವಿದ್ಯಾರ್ಥಿಗಳು ಮೊಬೈಲ್ ಮತ್ತು ದುಶ್ಚಗಳಿಂದ ದೂರವಿರಿ ಎಂದು ಪಿಎಸ್ಐ ವಿಜಯಕೃಷ್ಣ ಹೇಳಿದರು.
ತಾಲ್ಲೂ‌ಕಿನ ಅರಸೀಕೆರೆ ಜಿ.ವಿ.ವಿ.ಡಿ.ಎಸ್. ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮಕ್ಕಳ ದಿನಾಚರಣೆ ನಿಮಿತ್ತ  ಸೈಬರ್ ಕ್ರೈಮ್, ಮಕ್ಕಳ ಸಂರಕ್ಷಣೆ, ಬಾಲ್ಯ ವಿವಾಹ, ರಸ್ತೆ ಅಪಘಾತ ತಡೆ, ಪೊಕ್ಸೊ ಪ್ರಕರಣ ಕುರಿತು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳಬೇಕು. ಮೊಬೈಲ್ ನೋಡುತ್ತಾ ಕಾಲಹರಣ ಮಾಡಬೇಡಿ. ಇದರಿಂದ ಸೈಬರ್ ಅಪರಾಧ ಹೆಚ್ಚಾಗುತ್ತಿವೆ.‌ಇದನ್ನು ತಡೆಯಲು 1932 ಅಥವಾ 112ಗೆ ಕರೆ‌ಮಾಡಿದರೆ , ತಕ್ಷಣ ಪೊಲೀಸರು, ಸಂಬಂಧಪಟ್ಟ ಇಲಾಖೆಯಿಂದ ಸ್ಪಂದನೆ ಸಿಗುತ್ತದೆ ಎಂದರು.
ಮುಖ್ಯಶಿಕ್ಷಕಿ  ಶಾಂತಕುಮಾರಿ, ಸಹ ಶಿಕ್ಷಕರಾದ ರಘು, ರೇಖಾ, ರಾಜೇಶ್ವರಿ, ಮಂಜುಳಾ, ಸಿದ್ದರಾಮನ ಗೌಡ, ಕಾವೇರಿ, ಅರ್ಪಿತಾ,  ರವಿನಾಯ್ಕ್, ಪೂರ್ಯನಾಯ್ಕ್, ಮಹಾಂತೇಶ್, ರವಿಕುಮಾರ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.