Home ಸುದ್ದಿಗಳು  ಆಯುರ್ವೇದ ಪ್ರಾಥಮಿಕ ಪಠ್ಯವಾಗಲಿ : ಪ್ರಮೋದ ಮುತಾಲಿಕ್
ಸುದ್ದಿಗಳು

 ಆಯುರ್ವೇದ ಪ್ರಾಥಮಿಕ ಪಠ್ಯವಾಗಲಿ : ಪ್ರಮೋದ ಮುತಾಲಿಕ್

Share
ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ
Share

ಹರಪನಹಳ್ಳಿ : ಪ್ರಕೃತಿ, ಯೋಗ ಚಿಕಿತ್ಸೆ ಪ್ರಚಾರ ಪಡಿಸುವ ಸಲುವಾಗಿ  ಆಯುರ್ವೇದ ಪದ್ದತಿ ಕುರಿತು ಪಠ್ಯದಲ್ಲಿ ಅಳವಡಿಸುವ ಅಗತ್ಯವಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ತಿಳಿಸಿದರು.

ತಾಲ್ಲೂಕಿನ ಕುಮಾರನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಇಂಗ್ಲೀಷ್ ಮೆಡಿಸನ್ ಮನುಷ್ಯರ ಆರೋಗ್ಯವನ್ನು ಹಾಳು ಮಾಡುತ್ತದೆ. ಜಗತ್ತು ಆವರಿಸಿರುವ ಇಂಗ್ಲೀಷ್ ಮೆಡಿಸನ್ ದೊಡ್ಡ ಮಾಫಿಯಾ, ಇದರ ಬಗ್ಗೆ ಜನರು ಜಾಗೃತರಾಗಬೇಕು. ಜನನಿ ಯೋಗ ಕೇಂದ್ರದಲ್ಲಿ ಒಂದು ವಾರ ಚಿಕಿತ್ಸೆ ಪಡೆದು, ಸಾಕಷ್ಟು ಉಪಯೋಗವಾಗಿದೆ. ಮದ್ಯಕರ್ನಾಟಕದಲ್ಲಿ ಆರಂಭವಾಗಿರುವ 100 ಹಾಸಿಗೆಯ ಆಸ್ಪತ್ರೆಯಲ್ಲಿ ಪ್ರತಿಯೊಬ್ಬರು ಇಂತಹ ಕೇಂದ್ರದಲ್ಲಿ ಚಿಕಿತ್ಸೆ ಪಡೆದರೆ, ಸದೃಢ ಆರೋಗ್ಯ ನಮ್ಮದಾಗಿಸಿಕೊಳ್ಳಬಹುದು ಎಂದು ತಿಳಿಸಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಲ್ಲಿ ಸರಳ ಆಹಾರ ಪದ್ದತಿ, ಯೋಗಾಭ್ಯಾಸ ಹಾಗೂ ಆಧುನಿಕ ಉಪಕರಣ ಜೊತೆ ದೈಹಿಕ ವ್ಯಾಯಾಮ ಇರುತ್ತದೆ. ಇಂತಹ ಆರೋಗ್ಯ ಪದ್ದತಿ ನಮ್ಮ ದೇಶದಲ್ಲಿ ಹೆಚ್ಚು ಪ್ರಚಾರ ಮಾಡುವ ಅಗತ್ಯವಿದೆ ಎಂದು ಹೇಳಿದರು. ಶ್ರೀರಾಮಸೇನೆ ದಕ್ಷಿಣ ಪ್ರಾಂತ ಸಂಚಾಲಕ ನರೆಗಲ್ ಸುದರ್ಶನ್, ಆಸ್ಪತ್ರೆ ಮಾಧ್ಯಮ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್, ಪ್ರಾಂಶುಪಾಲ ಡಾ.ರಾಜೇಶ ಪಾದೆಕಲ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.