Home ಸುದ್ದಿಗಳು ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಿ: ಶ್ವೇತಾ
ಸುದ್ದಿಗಳು

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಿ: ಶ್ವೇತಾ

Share
ಬಾಗಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘ
Share

ಹರಪನಹಳ್ಳಿ: ತಾಲ್ಲೂಕಿನ ಬಾಗಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ನಿರ್ದೇಶಕಿ ಶ್ವೇತಾ, ‘ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಗಳಾಗಿ ಹಾಗೂ ಸ್ವತಂತ್ರವಾಗಿ ಬೆಳೆಯಬೇಕು. ತಮ್ಮ ಹಕ್ಕುಗಳನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದು ಕಿವಿಮಾತು ಹೇಳಿದರು.

‘ಮಕ್ಕಳು 18 ವರ್ಷ ತುಂಬುವವರೆಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಉನ್ನತ ಶಿಕ್ಷಣವನ್ನು ಪಡೆಯಬೇಕು. ಸಮಾಜದಲ್ಲಿರುವ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳನ್ನು ಸಂಪೂರ್ಣವಾಗಿ ತಡೆಯಲು ಎಲ್ಲರೂ ಒಗ್ಗೂಡಬೇಕು’ ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಸಾಧಕಿಯರಿಗೆ ಸನ್ಮಾನ:

ಕಾರ್ಯಕ್ರಮದಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಿಕೊಟ್ಟರು. ಇದೇ ವೇಳೆ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ಸಿಬ್ಬಂದಿಯನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಬಾಗಳಿಯ ಕೀಲು ಮೂಳೆ ನಾಟಿ ವೈದ್ಯರಾದ ಪಂಡಿತ್ ಬಿ.ಬಿ. ವಸರಪ್ಪ, ಅರಕನಹಳ್ಳಿಯ ಆಶಾ ಮೇಲ್ವಿಚಾರಕಿ ಪವಿತ್ರಾ, ಹರಪನಹಳ್ಳಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರತ್ನಮ್ಮ ದೊಡ್ಡಬೆಣ್ಣೆ ಹಾಗೂ ಕೂಲಹಳ್ಳಿಯ ವಿಪ್ರಾ ಗ್ರಾಮೀಣ ಸಂಸ್ಥೆಯ ಅಧ್ಯಕ್ಷ ಸೋಮನಾಥ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.