Home ಕೃಷಿ ಮಳೆ ಅಭಾವ: ‘ಪರ್ಯಾಯ ಬೆಳೆ ಪದ್ಧತಿ’ ಅಳವಡಿಕೆಗೆ ಕೃಷಿ ಇಲಾಖೆ ಸಲಹೆ
ಕೃಷಿ

ಮಳೆ ಅಭಾವ: ‘ಪರ್ಯಾಯ ಬೆಳೆ ಪದ್ಧತಿ’ ಅಳವಡಿಕೆಗೆ ಕೃಷಿ ಇಲಾಖೆ ಸಲಹೆ

Share
Share

ಬಳ್ಳಾರಿ :  ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ, ರೈತರು ಆತಂಕಕ್ಕೆ ಒಳಗಾಗದೆ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಶಿಫಾರಸ್ಸು ಮಾಡಿರುವ ‘ಪರ್ಯಾಯ ಬೆಳೆ ಪದ್ಧತಿ’ಯನ್ನು ಅಳವಡಿಸಿಕೊಳ್ಳಬೇಕಾಗಿ ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಕೋರಿದ್ದಾರೆ.

ಮಳೆ ಅಭಾವ ಮತ್ತು ಬಿತ್ತನೆ ಕುಂಠಿತ:
ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 599.0 ಮಿ.ಮೀ ಇದ್ದು, ಜೂನ್-30ರ ಅಂತ್ಯದ ವೇಳೆಗೆ 146.1 ಮಿ.ಮೀ ವಾಡಿಕೆ ಮಳೆಗೆ ಎದುರಾಗಿ 140.7 ಮಿ.ಮೀ (ಶೇ.97) ಮಳೆಯಾಗಿದೆ. ಒಟ್ಟಾರೆ ಬಿದ್ದ ಮಳೆಯ ಪ್ರಮಾಣ ಹೆಚ್ಚಾಗಿದ್ದರೂ ಸಹ, ಮಳೆ ದಿನಗಳು ಕಡಿಮೆಯಿರುವುದು, ಹೆಚ್ಚು ದಿನಗಳ ಅಂತರ ಮತ್ತು ಸಮಪ್ರಮಾಣದ ಹಂಚಿಕೆ ಇಲ್ಲದಿರುವುದರಿಂದ ಜಿಲ್ಲೆಯಲ್ಲಿ ಕೇವಲ ಶೇ.24 ರಷ್ಟು ಮಾತ್ರ ಬಿತ್ತನೆಯಾಗಿದೆ.

ವಿಶೇಷವಾಗಿ ಸಂಡೂರು ತಾಲ್ಲೂಕಿನಲ್ಲಿ 221.6 ಮಿ.ಮೀ ವಾಡಿಕೆ ಮಳೆಗೆ ಎದುರಾಗಿ ಕೇವಲ 88.0 ಮಿ.ಮೀ ಮಳೆಯಾಗಿದ್ದು, ಶೇ. 60 ರಷ್ಟು ಮಳೆ ಕೊರತೆ ಉಂಟಾಗಿದೆ. ಉಳಿದ ತಾಲ್ಲೂಕುಗಳಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ.

‘ಎಲ್ ನಿನೋ’ ಮುನ್ಸೂಚನೆ – ಪರ್ಯಾಯ ಬೆಳೆಗೆ ಒತ್ತು:
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಪ್ರಸ್ತುತ ವರ್ಷವು ‘ಎಲ್ ನಿನೋ’ ವರ್ಷವಾಗಿದ್ದು, ಇನ್ನು ಮುಂದೆಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಂಭವವಿದೆ. ಹಾಗಾಗಿ ರೈತರು ಸಾಂಪ್ರದಾಯಿಕ ಬೆಳೆಗಳನ್ನೇ ನಂಬಿ ಕೂರದೆ, ತಿಂಗಳು ಮತ್ತು ವಾರವಾರು ಬೀಳುವ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಕೆಳಗಿನ ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಜುಲೈ 3ನೇ ಅಥವಾ 4ನೇ ವಾರದಲ್ಲಿ ಮಳೆಯಾದರೆ ತೊಗರಿ, ಶೇಂಗಾ, ಸಜ್ಜೆ, ಸೂರ್ಯಕಾಂತಿ ಮತ್ತು ನವಣೆ ಬೆಳೆಗಳನ್ನು ಬೆಳೆಯಬಹುದು. ಮೆಕ್ಕೆಜೋಳವನ್ನೂ ಸಹ ಪರಿಗಣಿಸಬಹುದು. ಆಗಸ್ಟ್ 1ನೇ ವಾರದಲ್ಲಿ ಮಳೆಯಾದರೆ ತೊಗರಿ, ಶೇಂಗಾ, ಸಜ್ಜೆ, ಸೂರ್ಯಕಾಂತಿ, ನವಣೆ ಮತ್ತು ರಾಗಿ ಬೆಳೆಗಳಿಗೆ ಆದ್ಯತೆ ನೀಡಬೇಕು.

ಅಂತರಬೆಳೆ ಪದ್ಧತಿ: ತೊಗರಿ ಮತ್ತು ಶೇಂಗಾ ಬೆಳೆಯನ್ನು (3:1) ಅನುಪಾತದಲ್ಲಿ ಅಂತರಬೆಳೆಯಾಗಿ ಬೆಳೆಯಲು ವಿಜ್ಞಾನಿಗಳು ಶಿಫಾರಸ್ಸು ಮಾಡಿದ್ದಾರೆ. ನವಣೆ ಮತ್ತು ರಾಗಿ ಬೆಳೆಗಳನ್ನೂ ಪರಿಸ್ಥಿತಿಗೆ ತಕ್ಕಂತೆ ಬಳಸಿಕೊಳ್ಳಬಹುದು. ರೈತ ಬಾಂಧವರು ಹವಾಮಾನದ ವೈಪರೀತ್ಯವನ್ನು ಸಮರ್ಥವಾಗಿ ಎದುರಿಸಲು ಈ ಶಿಫಾರಸ್ಸುಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ....

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ...

ಮೀನು ಗಾರಿಕೆ ಇಲಾಖೆ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.