Home ವ್ಯಕ್ತಿ ಕಾಣೆ : ಪತ್ತೆಗೆ ಮನವಿ
Homeವಿಶೇಷ ವರದಿಗಳು

ವ್ಯಕ್ತಿ ಕಾಣೆ : ಪತ್ತೆಗೆ ಮನವಿ

Share
Share

ಬಳ್ಳಾರಿ :  ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ 60 ವರ್ಷದ ವ್ಯಕ್ತಿ ಜೂನ್ 22 ರಂದು ಹಪ್ಪಳ ಮಾರಿಕೊಂಡು ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ :
ಎತ್ತರ 6.2 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಮತ್ತು ಬಿಳಿ ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಗೀರುಗಳುಳ್ಳ ಬಣ್ಣದ ತುಂಬು ತೋಳಿನ ಬಿಳಿ ಬಣ್ಣದ ಅಂಗಿ ಮತ್ತು ಪಾಚಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಿವುಡ ಮತ್ತು ಮೂಗನಾಗಿರುತ್ತಾನೆ.

ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯ ಆದಲ್ಲಿ ತಕ್ಷಣವೇ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.