Home ಅರಸನಾಳು ಎಚ್.ಶಿವಾನಂದಗೆ ‘ಬಸವ ಚೇತನ ಪ್ರಶಸ್ತಿ’
Homeಶಿಕ್ಷಣ

ಅರಸನಾಳು ಎಚ್.ಶಿವಾನಂದಗೆ ‘ಬಸವ ಚೇತನ ಪ್ರಶಸ್ತಿ’

Share
ಅರಸನಾಳು ಎಚ್.ಶಿವಾನಂದ
Share

ಹರಪನಹಳ್ಳಿ : ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸನಾಳು ಗ್ರಾಮದ ಉಪನ್ಯಾಸಕ ಎಚ್.ಶಿವಾನಂದ ಅವರಿಗೆ ಬಸವ ಚೇತನ ಪ್ರಶಸ್ತಿ ಲಭಿಸಿದ್ದು, ಭಾನುವಾರ ಹಾವೇರಿಯಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪಿಯು ಕಾಲೇಜಿನಲ್ಲಿ ಭೂಗೋಳ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಎಚ್.ಶಿವಾನಂದ ಅವರೂ ಹಲವು ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆ ಪರಿಗಣಿಸಿ  ಚಿತ್ರದುರ್ಗ ಕರುನಾಡು ಕಲ್ಪವೃಕ್ಷ ಪ್ರಕಾಶನ ಸಂಸ್ಥೆ, ಕರುನಾಡು ಕಲ್ಪವೃಕ್ಷ  ಪೌಂಡೇಶನ್( ರಿ), ಕರ್ನಾಟಕ ಮತ್ತು ಸಾಹಿತ್ಯ ವೇದಿಕೆ ವತಿಯಿಂದ ಚಿತ್ರದುರ್ಗದಲ್ಲಿ ಜರುಗಿದ ಸಾಹಿತ್ಯ ಕಲ್ಪವೃಕ್ಷೋತ್ಸವ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು.

ಶಿವಾನಂದ ಅವರು ವೃತ್ತಿ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ನಿಸ್ವಾರ್ಥವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ಸೇವೆ ಗುರುತಿಸಿರುವ ಅನೇಕ ಸಂಸ್ಥೆಗಳು ಇವರಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿರುವುದು ಗಮನಾರ್ಹ. ಹಾವೇರಿಯಲ್ಲಿ ಜರುಗಿದ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುರೇಶ್ ಮಲ್ಲಾಡದ ಉದ್ಘಾಟಿಸಿದರು. ಸವಣೂರು ಹಿರಿಯ ಸಾಹಿತಿ ಡಾ.ಎಚ್.ಐ. ತಿಮ್ಮಾಪುರ ಸಮ್ಮೇಳನದ ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು.   ಕರುನಾಡು ಕಲ್ಪವೃಕ್ಷ ಫೌಂಡೇಶನ್ ರಾಜ್ಯಾಧ್ಯಕ್ಷ ರೇಖಾ ಶಿವರಾಮ್ ಭಟ್ ಆಶಯ ನುಡಿ ನುಡಿದರು.

ಕರುನಾಡು ಕಲ್ಪವೃಕ್ಷ ಫೌಂಡೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಗೌಡರ ಪ್ರಸ್ತಾವಿಕ ಮಾತನಾಡಿದರು.   ಸಾಹಿತಿಗಳಾದ ಸತೀಶ್ ಕುಲಕರ್ಣಿ, ಹಾವೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಲಿಂಗಯ್ಯ ಹಿರೇಮಠ, ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ಜಿಲ್ಲಾ ಅಧ್ಯಕ್ಷ ಗಿರೀಶ್ ಬಾರ್ಕಿ, ಶಿಕ್ಷಕ ಕೆ.ರಾಜಶೇಖರ್, ಲಿಂಗರಾಜ್ ಸೊಟ್ಟಪ್ಪನವರ್, ಸುಧಾ ಆಚಾರ್, ಮಂಜುನಾಥ್ ಪಾಟೀಲ್, ಕಾಂತೇಶ್ ರೆಡ್ಡಿ ಗೋಡಿಯಾಳ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.