Home ಸುದ್ದಿಗಳು  ಸ್ವಾವಲಂಬಿ ಬದುಕು ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳು ಪೂರಕ :  ಎಂ.ಪಿ.ಲತಾ ಮಲ್ಲಿಕಾರ್ಜುನ್.
ಸುದ್ದಿಗಳು

 ಸ್ವಾವಲಂಬಿ ಬದುಕು ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳು ಪೂರಕ :  ಎಂ.ಪಿ.ಲತಾ ಮಲ್ಲಿಕಾರ್ಜುನ್.

Share
BDCC,BANK,HOSAPETE,MPLATHA
Share

ವಿಜಯನಗರ(ಹೊಸಪೇಟೆ) : ಸಹಕಾರ ಸಂಸ್ಥೆಗಳ ತತ್ವಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ, ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬನೆಯ ಬದುಕನ್ನು ನೀಡುವಲ್ಲಿ ಸಹಕಾರ ಸಂಸ್ಥೆಗಳು ಪೂರಕವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.
ನಗರದ ಸುರಭಿ ಕಲ್ಯಾಣ ಮಂಟಪದ ಎಂ.ಪಿ.ರವೀAದ್ರ ವೇದಿಕೆಯಲ್ಲಿ ರಾಜ್ಯ ಸಹಕಾರಿ ಮಂಡಳಿ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಸಪೇಟೆ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಅವಳಿ ಜಿಲ್ಲೆಯ ಎಲ್ಲಾ ವರ್ಗದ ಸಹಕಾರಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.
ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗೆ ಸಹಕಾರ ಸಂಸ್ಥೆಗಳು ಬಹುಮುಖ್ಯ ಪಾತ್ರವನ್ನು ವಹಿಸಲಿವೆ. ಈಗಾಗಲೇ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಿದ್ದಾರೆ. ಜತೆಗೆ ಸಹಕಾರ ಸಂಸ್ಥೆಗಳಲ್ಲಿ ಭಾಗವಹಿಸುವ ಮೂಲಕ ಇನ್ನಷ್ಟು ಸಧೃಡಗೊಳ್ಳಬಹುದಾಗಿದೆ. ಈ ಬಾರಿಯ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಘಗಳು’ ಎಂಬುದಾಗಿದೆ. ಸಹಕಾರ ಸಂಸ್ಥೆಗಳು ದೇಶವನ್ನು ಆರ್ಥಿಕವಾಗಿ ಸದೃಢವಾಗಿಸುವುದರ ಜತೆಗೆ ಕೃಷಿ, ಹಾಲು, ವಸತಿ, ಕೈಗಾರಿಕೆ, ಬ್ಯಾಂಕಿಂಗ್ ಮತ್ತು ಸೇವಾ ವಲಯದಲ್ಲಿ ಕ್ಷಿಪ್ರ ಸಾಧನೆಯನ್ನು ಮಾಡುತ್ತಿವೆ. ಸಂಸ್ಥೆಗಳು ಪಾರದರ್ಶಕತೆ ಮತ್ತು ನಿಷ್ಠೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದರಿಂದ ಪ್ರಸ್ತುತದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ.

ಹೊಸಪೇಟೆ ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಕೆ.ತಿಪ್ಪೇಸ್ವಾಮಿ ಮಾತನಾಡಿ, ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣ ಮಾಡುವ ಸದುದ್ದೇಶದಿಂದ ಐದು ತಾಲೂಕಿಗೆ 100 ಕೋಟಿ ರೂ.ಗಳನ್ನು ಘೋಷಣೆ ಮಾಡಲಾಗಿದೆ. ಸಂಸ್ಥೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಬೇಕಿದೆ. ಸಾರ್ವತ್ರಿಕ ಅಭಿವೃದ್ದಿಗೆ ಮಹಿಳೆಯರ ಅಭಿವೃದ್ದಿ ಬಹಳ ಮುಖ್ಯ. ಆದ್ದರಿಂದ ಹೆಚ್ಚೆಚ್ಚು ಮಹಿಳೆಯರು ಸಹಕಾರಿ ಸಂಘಗಳಲ್ಲಿ ಭಾಗವಹಿಸಬೇಕಿದೆ. ಈ ಸಂಸ್ಥೆಗಳು ನಿಸ್ವಾರ್ಥ ಸೇವೆಯನ್ನು ಮಾಡುವವರಿಗೆ ಒಂದು ಉತ್ತಮ ವೇದಿಕೆಯಾಗಿದೆ. ನಂಬಿಕೆ ಮತ್ತು ವಿಶ್ವಾಸದ ಮೇಲೆ ಎಲ್ಲಾ ಸಹಕಾರಿ ಸಂಸ್ಥೆಗಳ ಭವಿಷ್ಯ ನಿಂತಿದೆ. ಸಹಕಾರಿ ಸಂಸ್ಥೆಗಳಲ್ಲಿನ ನೌಕರರು ಸಾರ್ವಜನಿಕರ ಜತೆಗೆ ಅತ್ಯುತ್ತಮವಾಗಿ ನಡೆದುಕೊಡು ಹೋಗುವ ಹೊಣೆಗಾರಿಕೆ ಪ್ರತಿಯೊಬ್ಬ ಸಹಕಾರಿಗಳ ಮೇಲಿದೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ವೇದಿಕೆಯಲ್ಲಿ ಸಹಕಾರ ಸಪ್ತಾಹದ ನಿಮಿತ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ‘ಸಹಕಾರ ಪತ್ರಿಕೆ’ಯ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಬಿಡಿಸಿಸಿ ಬ್ಯಾಂಕ್‌  ನಿರ್ದೇಶಕ ಟಿ.ಎಂ.ಚಂದ್ರಶೇಖರಯ್ಯ ಮತ್ತು ಚೊಕ್ಕ ಬಸವನಗೌಡ್ರು, ಬಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಹುಲುಗಪ್ಪ, ವಿಶ್ವನಾಥ, ಮೂಕಯ್ಯಸ್ವಾಮಿ, ಅಕ್ಕಿ ಬಸವರಾಜ, ಅಪೆಕ್ಸ್ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿ ದೇವರಾಜ್, ರಾಬಕೊ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಸತ್ಯನಾರಾಯಣ ನೆಕ್ಕಂಟಿ, ಹೊಸಪೇಟೆ ಬಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಐ.ದಾರುಕೇಶ್, ಕೆಓಫ್‌ನ ಉಪಾಧ್ಯಕ್ಷ ಸೂಗನಗೌಡ, ಸೇರಿದಂತೆ ಅಪೆಕ್ಸ್ ಬ್ಯಾಂಕ್‌ನ ಅಧಿಕಾರಿಗಳು ಮತ್ತು ರೈತರು, ಸಾರ್ವಜನಿಕರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.