Home ಸುದ್ದಿಗಳು ಬೀದಿ ಬದಿ ವ್ಯಾಪಾರಕ್ಕೆ ಅವಕಾಶಕ್ಕೆ ಆಗ್ರಹ
ಸುದ್ದಿಗಳು

ಬೀದಿ ಬದಿ ವ್ಯಾಪಾರಕ್ಕೆ ಅವಕಾಶಕ್ಕೆ ಆಗ್ರಹ

Share
BEEDI BADI-HARAPANAHALLI
Share

ಹರಪನಹಳ್ಳಿ : ಪ್ರವಾಸಿ ಮಂದಿರ ಅಕ್ಕಪಕ್ಕದಲ್ಲಿ ಅಂಗಡಿ ಇಟ್ಟುಕೊಂಡಿದ್ದ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ   ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ನೇತರತ್ವದಲ್ಲಿ ವ್ಯಾಪಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಪುರಸಭೆ ಆವರಣದಲ್ಲಿ ಪ್ರತಿಭಟಿಸಿದ ವ್ಯಾಪಾರಸ್ಥರು ನಮಗೆ ಅಂಗಡಿ ನಡೆಸಲು ಅವಕಾಶಕೊಡಿ ಎಂದು ಆಗ್ರಹಿಸಿ ವ್ಯವಸ್ಥಾಪಕ ಅಶೋಕ ಅವರ ಮೂಲಕ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ 2014ರ ಪ್ರಕಾರ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಪ್ರತಿ 5 ವರ್ಷಕ್ಕೊಮ್ಮೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆದರೆ ಯಾವುದೇ ಸಮೀಕ್ಷೆ ನಡೆಸಿಲ್ಲ, ನೋಟಿಸ್ ಜಾರಿ ಮಾಡದೇ ಏಕಾಏಕಿ ಒಕ್ಕಲೆಬ್ಬಿಸಲಾಗಿದ ಎಂದು ದೂರಿದರು.

ಕೆಲವು ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳ ಪ್ರಭಾವಕ್ಕೆ ಒಳಗಾಗಿರುವ ಅಧಿಕಾರಿಗಳು, ಪೊಲೀಸ್‍ ರನ್ನು ಜೊತೆಗಿಟ್ಟುಕೊಂಡು ಕೇವಲ ಐಬಿ ಪಕ್ಕದ ರಸ್ತೆಯಲ್ಲಿ ಅಷ್ಟೇ ವ್ಯಾಪರಸ್ಥರನ್ನು ಎತ್ತಂಗಡಿ ಮಾಡಿರುವುದು ಸರಿಯಲ್ಲ. ಕೊಟ್ಟೂರು ರಸ್ತೆ, ಅರಸೀಕೆರೆ ಬೈಪಾಸ್ ರಸ್ತೆ, 8ನೇ ವಾರ್ಡ್‍ ಸರ್ಕಾರಿ ಶಾಲೆ ಬಳಿ ಅಂಗಡಿಗಳಿಗೆ ಅವಕಾಶ ಕೊಡಲಾಗಿದೆ ಎಂದು ದೂರಿದರು. ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರು ಬೀದಿ ಬದಿ ವ್ಯಾಪಾರಿಗಳನ್ನು ಅವಾಚ್ಯ ಪದಗಳಿಂದ ನಿಂಧಿಸಿ, ಅಸಭ್ಯವಾಗಿ ವರ್ತಿಸುತ್ತಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ಸಂದೇರ ಪರಶುರಾಮ್, ಜಿಲ್ಲಾ ಕಾರ್ಯದರ್ಶಿ ಗುಳೇದಹಟ್ಟಿ ಸಂತೋಷ್,ಕರಿಬಸಪ್ಪ, ಇಸ್ಮಾಯಿಲ್, ರಮೇಶ್, ಸುರೇಶ್, ಎಸ್.ರಾಜು, ಸುಹೀಲ್, ಮಾಬು, ಕೃಷ್ಣ, ಪರಸಪ್ಪ, ಮಂಜಪ್ಪ, ಸಂತೋಷ್, ರಾಜಸಾಬ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.