Home ಸುದ್ದಿಗಳು ಬೆಣ್ಣೆಹಳ್ಳಿ: ನಾಳೆ ಆಂಜನೇಯ ಸ್ವಾಮಿ ರಥೋತ್ಸವ
ಸುದ್ದಿಗಳು

ಬೆಣ್ಣೆಹಳ್ಳಿ: ನಾಳೆ ಆಂಜನೇಯ ಸ್ವಾಮಿ ರಥೋತ್ಸವ

Share
Share

ಹರಪನಹಳ್ಳಿ: ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ವಿಶೇಷ ಹರಕೆಯಾದ ‘ಮುಳ್ಳಿನ ಪವಾಡ’ ಕಾರ್ಯಕ್ರಮಗಳು ಮಾರ್ಚ್ 18ರಿಂದ 20ರವರೆಗೆ ವಿಜೃಂಭಣೆಯಿಂದ ಜರುಗಲಿವೆ.

ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ (ಮಾ. 18) ಸಂಜೆ 7 ಗಂಟೆಗೆ ರಥಕ್ಕೆ ಕಳಸಾರೋಹಣ ನೆರವೇರಲಿದೆ. ಬಳಿಕ ಮುಳ್ಳಿನ ಪವಾಡ ನಡೆಸಿಕೊಡುವ ಆರ್. ಜಗದೀಶ್ ಗೌಡ ಅವರಿಗೆ ಕಂಕಣ ಕಟ್ಟುವ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಸಡಗರದ ರಥೋತ್ಸವ: ಮಾ. 19ರ ಗುರುವಾರ ಬೆಳಗಿನ ಜಾವ 4 ಗಂಟೆಗೆ ಶ್ರೀ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ ಪೂಜೆ ನೆರವೇರಲಿದೆ. ಪರಾಭವ ಸಂವತ್ಸರದ ರೇವತಿ ನಕ್ಷತ್ರದ ಯುಗಾದಿ ಪಾಡ್ಯದ ಶುಭ ದಿನದಂದು ಸಂಜೆ 5.30ಕ್ಕೆ ದೇವಸ್ಥಾನದ ಆವರಣದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಇಡೀ ಗ್ರಾಮ ಹಾಗೂ ದೇವಸ್ಥಾನವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿದೆ.

ರೋಚಕ ಮುಳ್ಳಿನ ಪವಾಡ: ಮಾ. 20ರ ಶುಕ್ರವಾರ ಸಂಜೆ 5.30ಕ್ಕೆ ಜಾತ್ರೆಯ ಪ್ರಮುಖ ಆಕರ್ಷಣೆಯಾದ ‘ಮುಳ್ಳಿನ ಪವಾಡ’ ನಡೆಯಲಿದೆ. ಈ ಪವಾಡ ನಡೆಸುವ ಜಗದೀಶ್ ಗೌಡ ಅವರು ಮೂರು ದಿನಗಳ ಕಾಲ ಕಠಿಣ ವ್ರತ ಆಚರಿಸಲಿದ್ದಾರೆ. ಹರಿತವಾದ ಕಾರಿ ಮುಳ್ಳಿನಿಂದ ಸಿದ್ಧಪಡಿಸಿದ ಪಲ್ಲಕ್ಕಿಯ ಮೇಲೆ ಮಲಗುವ ಇವರನ್ನು ಭಕ್ತರು ಹೊತ್ತು ದೇವಸ್ಥಾನ ಹಾಗೂ ಓಕುಳಿ ಗುಂಡಿಯ ಸುತ್ತ ಮೆರವಣಿಗೆ ಮಾಡಲಿದ್ದಾರೆ.

ಅಂದು ಬೆಳಿಗ್ಗೆ ಭೇಟಿ ಮರ ತರುವುದು ಹಾಗೂ ಓಕುಳಿ ಗುಂಡಿಗೆ ನೀರು ತುಂಬಿಸುವ ಕಾರ್ಯಕ್ರಮ ನಡೆಯಲಿದೆ. ಸಂಜೆ ಮುಳ್ಳಿನ ಪವಾಡದ ಬಳಿಕ ಓಕುಳಿ ಆಟ, ಕಾಯಿ ಹರಿಯುವ ಸ್ಪರ್ಧೆ ಹಾಗೂ ಚಂದ್ರ ದರ್ಶನ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಯ ಸಂಪ್ರದಾಯದಂತೆ ಓಕುಳಿ ಗುಂಡಿಯಲ್ಲಿ ಮಕ್ಕಳು ಹಾಗೂ ಯುವಕರು ಹಾರಿ ಸಂಭ್ರಮಿಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.