Home ವಿಜಯನಗರ: ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Homeಶಿಕ್ಷಣ

ವಿಜಯನಗರ: ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
Share

ಹೊಸಪೇಟೆ (ವಿಜಯನಗರ): ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿರುವ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿಥಿ ಶಿಕ್ಷಕರ ಹುದ್ದೆಗಳ ವಿವರ (ಒಟ್ಟು 16 ಹುದ್ದೆಗಳು) ವಸತಿ ಶಾಲೆಗಳಲ್ಲಿ ಒಟ್ಟು 16 ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ವಿಷಯವಾರು ವಿವರ ಈ ಕೆಳಗಿನಂತಿದೆ:

ಇಂಗ್ಲಿಷ್: 6 ಹುದ್ದೆಗಳು

ಗಣಕಯಂತ್ರ ಶಿಕ್ಷಕ: 3 ಹುದ್ದೆಗಳು

ಹಿಂದಿ: 2 ಹುದ್ದೆಗಳು

ವಿಜ್ಞಾನ: 2 ಹುದ್ದೆಗಳು

ಕನ್ನಡ: 1 ಹುದ್ದೆ

ಗಣಿತ: 1 ಹುದ್ದೆ

ದೈಹಿಕ ಶಿಕ್ಷಕ: 1 ಹುದ್ದೆ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಬಿ.ಎ ಬಿ.ಇಡಿ (B.A., B.Ed.), ಬಿ.ಎಸ್ಸಿ ಬಿ.ಇಡಿ (B.Sc., B.Ed.), ಬಿ.ಪಿ.ಇಡಿ (B.P.Ed.), ಬಿ.ಎಸ್ಸಿ ಕಂಪ್ಯೂಟರ್ (B.Sc. Computer) ಅಥವಾ ಬಿ.ಸಿ.ಎ (BCA) ಪದವಿ ಹೊಂದಿರಬೇಕು.ಅತಿಥಿ ಉಪನ್ಯಾಸಕರ ಹುದ್ದೆಗಳ ವಿವರ (ಒಟ್ಟು 12 ಹುದ್ದೆಗಳು) ವಸತಿ ಪಿಯು ಕಾಲೇಜುಗಳಲ್ಲಿ ಒಟ್ಟು 12 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ:

ಕನ್ನಡ: 2 ಹುದ್ದೆಗಳು

ಇಂಗ್ಲಿಷ್: 2 ಹುದ್ದೆಗಳು

ಭೌತಶಾಸ್ತ್ರ: 2 ಹುದ್ದೆಗಳು

ರಸಾಯನಶಾಸ್ತ್ರ: 2 ಹುದ್ದೆಗಳು

ಗಣಕಯಂತ್ರ: 2 ಹುದ್ದೆಗಳು

ಗಣಿತ: 1 ಹುದ್ದೆ

ಜೀವಶಾಸ್ತ್ರ: 1 ಹುದ್ದೆ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯಗಳಲ್ಲಿ ಎಂ.ಎ ಬಿ.ಇಡಿ (M.A.,B.Ed.), ಎಂ.ಎಸ್ಸಿ ಬಿ.ಇಡಿ (M.Sc., B.Ed.) ಅಥವಾ ಎಂ.ಸಿ.ಎ (MCA) ಸ್ನಾತಕೋತ್ತರ ಪದವಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕ

ಅರ್ಜಿ ಪಡೆಯುವ ಸ್ಥಳ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸಮೀಪದ ಯಾವುದೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದು. ಕೊನೆಯ ದಿನಾಂಕ: ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 15 ರೊಳಗೆ ಸಮೀಪದ ವಸತಿ ಶಾಲೆಅಥವಾ ಕಾಲೇಜಿನಲ್ಲಿ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: ಅಭ್ಯರ್ಥಿಗಳು ತಮ್ಮ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಎ. ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.