Home ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

Share
dc hosapete
Share

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ ನಿರ್ದೇಶನದಂತೆ ಜೂನ್ 15ರ ಒಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸೋಮವಾರ ತಮ್ಮ ಕಚೇರಿಯಲ್ಲಿ ಸಾಂಖ್ಯಿಕ (ಅಂಕಿ-ಸಂಖ್ಯೆ) ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (AEE) ತಹಶೀಲ್ದಾರ್‌ಗಳೊಂದಿಗೆ ಸೂಕ್ತ ಸಮನ್ವಯ ಸಾಧಿಸಬೇಕು ಎಂದು ತಾಕೀತು ಮಾಡಿದರು.

“ಪ್ರಕೃತಿ ವಿಕೋಪ, ಬರಗಾಲ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ಸರಿಯಾದ ವಿಮಾ ಸೌಲಭ್ಯ ಹಾಗೂ ಪರಿಹಾರ ಸಿಗಬೇಕಾದರೆ, ‘ಬೆಳೆ ಕಟಾವು ಪ್ರಯೋಗ’ದ (Crop Cutting Experiment) ಅಂಕಿ-ಅಂಶಗಳು ಅತ್ಯಂತ ನಿಖರವಾಗಿರಬೇಕು. ಅಧಿಕಾರಿಗಳ ತಪ್ಪು ಲೆಕ್ಕಾಚಾರದಿಂದ ಯಾವೊಬ್ಬ ರೈತನಿಗೂ ಅನ್ಯಾಯವಾಗಬಾರದು” ಎಂದು ಡಿಸಿ ಕಟ್ಟುನಿಟ್ಟಾಗಿ ಎಚ್ಚರಿಸಿದರು.

ಬೆಳೆ ಕಟಾವು ಪ್ರಯೋಗಗಳನ್ನು ಪಾರದರ್ಶಕವಾಗಿ ನಡೆಸಲು ಕೃಷಿ, ತೋಟಗಾರಿಕೆ ಅಧಿಕಾರಿಗಳು, ಪಿಡಿಒ (PDO) ಮತ್ತು ಗ್ರಾಮ ಆಡಳಿತ ಅಧಿಕಾರಿಗಳು (VAO) ಜಂಟಿಯಾಗಿ ಜಮೀನುಗಳಿಗೆ ಖುದ್ದು ಭೇಟಿ ನೀಡಬೇಕು. ಬೆಳೆ ಕಟಾವು ಪ್ರಕ್ರಿಯೆಗೆ ನಿಗದಿಪಡಿಸಿದ ತಾಂತ್ರಿಕ ಆ್ಯಪ್‌ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.  ಕಟಾವು ನಡೆಯುವ ಸಮಯದಲ್ಲಿ ಸಂಬಂಧಪಟ್ಟ ವಿಮಾ ಕಂಪನಿಯ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು.  ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನಮೂನೆ 1 ಮತ್ತು 2ರ ದಾಖಲೀಕರಣವನ್ನು ಕೂಡಲೇ ಪೂರ್ಣಗೊಳಿಸಬೇಕು. ರೈತರ ಬೆಳೆ ವಿಮೆಗೆ ಸಂಬಂಧಿಸಿದ ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನ ತೋರಿದರೆ, ಅಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ. ಪತ್ರಿಬಸಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ಶ್ರೀಹರ್ಷ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಭುರಾಜ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.