Home ಭಾರತ್ ಜೋಡೋ ಯುವ ಸಂಘ ರಚನೆಗೆ ಅರ್ಜಿ ಆಹ್ವಾನ
Homeಸುದ್ದಿಗಳು

ಭಾರತ್ ಜೋಡೋ ಯುವ ಸಂಘ ರಚನೆಗೆ ಅರ್ಜಿ ಆಹ್ವಾನ

Share
Share

ವಿಜಯನಗರ : ರಾಜ್ಯದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಬೃಹತ್ ಉದ್ದೇಶದಿಂದ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಆಯ್ಕೆಯಾಗುವ ಪ್ರತಿ ಸಂಘಕ್ಕೆ ಸರ್ಕಾರದ ವತಿಯಿಂದ ತಲಾ ರೂ. 10.00 ಲಕ್ಷ ಅಭಿವೃದ್ಧಿ ಅನುದಾನವನ್ನು ಒದಗಿಸಲಾಗುವುದು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದರಂತೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಈ ಸಂಘಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.

ನೋಂದಣಿ ಪ್ರಕ್ರಿಯೆ : 16 ರಿಂದ 35 ವರ್ಷದೊಳಗಿರಬೇಕು. ಪ್ರತಿ ಸಂಘದ ರಚನೆಗೆ ಕನಿಷ್ಠ 100 ಯುವ ಸಮೂಹದ ಸದಸ್ಯತ್ವ ಕಡ್ಡಾಯವಾಗಿರುತ್ತದೆ. ನೋಂದಣಿ ಶುಲ್ಕವಾಗಿ ರೂ.10 ನಿಗದಿಪಡಿಸಲಾಗಿದೆ. ಒಬ್ಬ ವ್ಯಕ್ತಿಗೆ ಕೇವಲ ಒಂದು ಸಂಘಕ್ಕೆ ಮಾತ್ರ ಸೇರಲು ಅವಕಾಶವಿದೆ. ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಥವಾ ನಗರದ ಸಂಬಂದಿತ ವಾರ್ಡ್ನ ಕಾಯಂ ನಿವಾಸಿಯಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅರ್ಹ ಹಾಗೂ ಆಸಕ್ತ ಯುವಜನರು ಇಲಾಖೆಯ ಅಧಿಕೃತ ಜಾಲತಾಣ  bjys.karnataka.gov.in  ಗೆ ಭೇಟಿ ನೀಡಿ ತಮ್ಮ ಮಾಹಿತಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.