Home ಕಡಿಮೆ ಅವಧಿಯಲ್ಲೇ ಶೇ. 100 ರಷ್ಟು ಗಣತಿ ನಮೂನೆ ವಿತರಿಸಿದ : ಬಿಎಲ್‌ಒಗಳಿಗೆ ಅಭಿನಂದನೆ
Homeಸುದ್ದಿಗಳು

ಕಡಿಮೆ ಅವಧಿಯಲ್ಲೇ ಶೇ. 100 ರಷ್ಟು ಗಣತಿ ನಮೂನೆ ವಿತರಿಸಿದ : ಬಿಎಲ್‌ಒಗಳಿಗೆ ಅಭಿನಂದನೆ

Share
Share

ವಿಜಯನಗರ(ಹೊಸಪೇಟೆ) : ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ 2026 ಕ್ಕೆ ಸಂಭಂದಿಸಿದಂತೆ ಕಡಿಮೆ ಅವಧಿಯಲ್ಲಿ ಶೇಕಡಾ 100 ರಷ್ಟು ಗಣತಿ ನಮೂನೆಗಳನ್ನು ಅರ್ಹ ಮತದಾರರಿಗೆ ವಿತರಣೆ ಮಾಡಿದ ಬಿ.ಎಲ್.ಓ ಗಳಿಗೆ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪ್ರಶಂಸೆ ಮತ್ತು ಅಭಿನಂದನೆ ಪತ್ರ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು.

ವಿಶೇಷ ತೀವ್ರ ಮತದಾರ ಪಟ್ಟಿ ಪರಿಷ್ಕರಣೆ 2026 ಕ್ಕೆ ಸಂಭಂದಿಸಿದಂತೆ 90 ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಭಂದಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಯಾಗಿ ಬಿ.ಎಲ್.ಓ ಗಳಿಗೆ ವಹಿಸಲಾಗಿದ್ದ ಗಣತಿ ನಮೂನೆಗಳನ್ನು ಎಲ್ಲಾ ಅರ್ಹ ಮತದಾರರಿಗೆ ವಿತರಿಸುವುದು ಮತ್ತು ಮೊಬೈಲ್ ಆಪ್ ನಲ್ಲಿ ಎಲ್ಲಾ ಗಣತಿ ನಮೂನೆಗಳ ಡಿಜಟಲೀಕರಣ ಕಾರ್ಯವನ್ನು ಕೇವಲ 10 ದಿನಗಳಲ್ಲಿ ಪೂರ್ಣಗೊಳಿಸಿ ಚುನಾವಣಾ ಪ್ರಮುಖ ಕಾರ್ಯದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಶೇಕಡಾ 100 ರಷ್ಟು ಗಣತಿ ನಮೂನೆಗಳನ್ನು ಅರ್ಹ ಮತದಾರರಿಗೆ ವಿತರಣೆ ಮಾಡಿದ್ದಾರೆ .

ಅಗತ್ಯ ದತ್ತಾಂಶಗಳನ್ನು ಸಂಗ್ರಹಣೆ ಮಾಡಿ ಬಿ.ಎಲ್.ಓ ಆಪ್ ನಲ್ಲಿ ಡಿಜಟಲೀಕರಣ ಮಾಡಿ ಯಶಸ್ವಿಯಾಗಿ ಮುಕ್ತಾಯಗೊಳಿಸಿದ ಪಾಪಿನಾಯಕನಹಳ್ಳಿ ಕಂದಾಯ ಗ್ರಾಮ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಗ್ರಾಮ ಆಡಳಿತಾಧಿಕಾರಿ ವಿನೋದ ಕುಂಬಾರ್, ಕುಂಟಗಲ್ಲಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಅಶ್ವಿನಿ ಜಿ.ಕೆ. ಪಾಪಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶಿಲ್ಪಕಲಾ, ಸೀತಾರಾಮ ತಾಂಡ ಕಂದಾಯ ಗ್ರಾಮ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಗ್ರಾಮ ಆಡಳಿತಾಧಿಕಾರಿ ಗಂಗಾಧರ, ಹೊಸಪೇಟೆ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಪ್ರಶಂಸಾ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶೃತಿ ಸೇರಿದಂತೆ ಇತರರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.