Home ಸುದ್ದಿಗಳು ಆರೋಗ್ಯ ಸಂಜೀವಿನಿ ಪ್ರಚುರಪಡಿಸಿ : ಸಿ.ಎಸ್.ಷಡಕ್ಷರಿ
ಸುದ್ದಿಗಳು

ಆರೋಗ್ಯ ಸಂಜೀವಿನಿ ಪ್ರಚುರಪಡಿಸಿ : ಸಿ.ಎಸ್.ಷಡಕ್ಷರಿ

Share
c-s-shadakshari-statepresident-ngo-vijayanagara
Share

ಆರೋಗ್ಯ ಸಂಜೀವಿನಿ ಪ್ರಚುರಪಡಿಸಿ : ಸಿ.ಎಸ್.ಷಡಕ್ಷರಿ

ಹೊಸಪೇಟೆ (ವಿಜಯನಗರ ಜಿಲ್ಲೆ) : ಸರ್ಕಾರಿ ನೌಕರರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುವರ್ಣ ಆರೋಗ್ಯ ಸಂಜೀವಿನಿ ( ಕೆ.ಎ.ಎಸ್.ಎಸ್.) ಯೋಜನೆ ಪ್ರಚುರಪಡಿಸಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ಹೊಸಪೇಟೆ ವಿಜಯನಗರ ಕಾಲೇಜಿನಲ್ಲಿ (ವಿಎನ್‍ಸಿ) ಸೋಮವಾರ ಆಯೋಜಿಸಿದ್ದ ಜಿಲ್ಲಾ ಸರ್ಕಾರಿ ನೌಕರರ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆರೋಗ್ಯ ಸಂಜೀವಿನಿ ಯೋಜನೆ ಸರ್ಕಾರಿ ನೌಕರರ ಮತ್ತು ಅವರನ್ನು ಅವಲಂಬಿತ ಕುಟುಂಬ ಸದಸ್ಯರಿಗೂ ಉಚಿತ ಚಿಕಿತ್ಸೆ ಕೊಡಿಸಲು ಅವಕಾಶವಿದೆ. ಮಹಿಳಾ ನೌಕರರಿದ್ದರೆ, ಅವರ ತಂದೆ ತಾಯಿಗೂ ಉಚಿತ ಚಿಕಿತ್ಸೆ ಕೊಡಿಸಬಹುದು ಎಂದರು.ಯಾವುದೇ ಸರ್ಕಾರಿ ನೌಕರರಿಗೆ ತೊಂದರೆ ಆದರೆ, ಕಿರುಕುಳ ನೀಡಿದರೆ ನೌಕರ ಸಂಘದ ಪದಾಧಿಕಾರಿಗಳು ತಕ್ಷಣವೇ ಅವರ ಜೊತೆಗೆ ನಿಲ್ಲಬೇಕು. ಅವರಿಗೆ ಧೈರ್ಯ ತುಂಬಬೇಕು. ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಉತ್ತಮ ಸಂಘಟನೆ ಆಗುತ್ತಿರುವುದಕ್ಕೆ ಮುಚ್ಚುಗೆ ವ್ಯಕ್ತಪಡಿಸಿದರು.

ಹೊಸಪೇಟೆ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಕೊಟ್ಟೂರು ಹಾಗೂ ಕೂಡ್ಲಿಗಿ ತಾಲ್ಲೂಕು ಸಮಿತಿ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಸನ್ಮಾನಿಸಿ, ಬಸವೇಶ್ವರ ಮೂರ್ತಿ ಉಡುಗೊರೆ ನೀಡಿದರು. ರಾಜ್ಯ ಉಪಾಧ್ಯಕ್ಷ ಡಾ.ಸದಾನಂದ ನೆಲ್ಕುದ್ರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರಿಗೌಡ, ರಾಜ್ಯ ಗೌರವ ಅಧ್ಯಕ್ಷ ಬಸವರಾಜ್, ವಿಜಯನಗರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾ ಖಜಾಂಚಿ ಮಲ್ಲೇಶಪ್ಪ, ಕಾರ್ಯದರ್ಶಿ ಪಂಪಣ್ಣ, ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ, ರಾಜ್ಯ ಪದಾಧಿಕಾರಿ ಎಚ್.ಬಸವರಾಜ್, ತಾಲ್ಲೂಕು ಅಧ್ಯಕ್ಷರುಗಳಾದ ಹರಪನಹಳ್ಳಿ ಎನ್.ಜಿ.ಮನೋಹರ, ಕೂಡ್ಲಿಗಿ ವೆಂಕಟೇಶ್, ಹಡಗಲಿ ಸೋಮನಗೌಡ, ಹಗರಿಬೊಮ್ಮನಹಳ್ಳಿ ಎಂ.ಪಿ.ಎಂ.ಮಂಜುನಾಥ, ಕೊಟ್ಟೂರು ಯೋಗೀಶ್ವರ ದಿನ್ನೆ, ಮಂಜುನಾಥ ಪೂಜಾರ, ಕೆ.ಅಂಜಿನಪ್ಪ, ಮರಿಯಪ್ಪ,  ಎನ್.ಟಿ.ಸೋಮಣ್ಣ, ಪಿ.ಬಸವರಾಜ್, ಸೂರ್ಯನಾಯ್ಕ, ಗುರುನಾಥ, ಗುರುಮೂರ್ತಿ, ಸಂಗಯ್ಯ, ವೀರಣ್ಣ ಲಕ್ಕಣ್ಣನವರ, ಅವಿನಾಶ, ಕರಿಬಸಪ್ಪ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.