Home ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಕ್ಷಯ ರೋಗಿಗಳಿಗೆ ಉಚಿತ ಪೌಷ್ಟಿಕಾಹಾರ ವಿತರಣೆ
Homeಸುದ್ದಿಗಳು

ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಕ್ಷಯ ರೋಗಿಗಳಿಗೆ ಉಚಿತ ಪೌಷ್ಟಿಕಾಹಾರ ವಿತರಣೆ

Share
Share

ಕಲಬುರಗಿ :  ಜಿಲ್ಲೆಯ ಅಳಂದ್ ತಾಲ್ಲೂಕಿನ 30 ಕ್ಷಯ ರೋಗಿಗಳಿಗೆ ಇಂದು ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪೌಷ್ಟಿಕಾಹಾರ ನೀಡಲಾಯಿತು. ಕಾರ್ಯಕ್ರಮವನ್ನು ಅಳಂದ್ ತಾಲ್ಲೂಕಿನ ತಾಲ್ಲೂಕು ವೈದ್ಯಾಧಿಕಾರಿ ಡಾ. ಉಸ್ಮಾನ್ ಸುತಾರ್ ಉದ್ಘಾಟಿಸಿದರು. ನಂತರ ಮಾತನಾಡಿ ಕ್ಷಯರೋಗ ಮಾರಕ ರೋಗ ಅಲ್ಲ.

ಸರಿಯಾದ ಸಮಯದಲ್ಲಿ ಔಷಧ ತೆಗೆದುಕೊಂಡರೆ ಆರು ತಿಂಗಳಲ್ಲಿ ಸಂಪೂರ್ಣ ಗುಣಮುಖ ರಾಗ ಬಹುದು. ಇದರ ಜೊತೆಗೆ ಪೌಷ್ಟಿಕಾಹಾರ ತಿನ್ನುವ ಮೂಲಕ ಇನ್ನೂ ಬೇಗನೆ ಗುಣಮುಖ ಆಗಬಹುದು. ಸರ್ಕಾರ ಔಷಧಿ ಕೊಡುತ್ತದೆ. ಕಡಗಂಚಿಯ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ನಮ್ಮ ತಾಲೂಕಿನಲ್ಲಿ ಅನೇಕ ಜನೋಪಕಾರಿ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತದೆ.

ಇವತ್ತು ಅಳಂದ್ ತಾಲ್ಲೂಕಿನ 30 ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರವಾದ ದಿನಕ್ಕೊಂದು ಮೊಟ್ಟೆ, ಹೆಸರು ಕಾಳು ಮತ್ತು ಎರಡು ಡಬ್ಬ ಪೌಷ್ಟಿಕಾಹಾರ ನೀಡಿ ಮಾನವೀಯತೆಯನ್ನು ತೋರಿಸುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಆರೋಗ್ಯ ಇಲಾಖೆಯ ಪ್ರಯುಕ್ತ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ನಂತರ ಕಾರ್ಮೆಲ್ ಜ್ಯೋತಿ ಟ್ರಸ್ಟ್ ನ ಕಾರ್ಯದರ್ಶಿ ಫಾ. ವಿಲಿಯಂ ಮಿರಾಂದ ಮಾತನಾಡಿ ಅಳಂದ್ ತಾಲ್ಲೂಕನ್ನು ಕ್ಷಯರೋಗಮುಕ್ತ ತಾಲ್ಲೂಕು ಮಾಡುವ ನಿಟ್ಟಿನಲ್ಲಿ ನಮ್ಮ ಎನ್.ಜಿ.ಒ. ಪ್ರಯತ್ನ ಮಾಡುತ್ತಿದೆ. ಇದಕ್ಕೆ ಕ್ಷಯ ರೋಗಿಗಳ ಸಹಕಾರ ಬೇಕು. ಈ ಕಾಯಿಲೆ ಇತರರಿಗೆ ಹರಡದಂತೆ ನೀವು ಜಾಗರೂಕತೆಯಿಂದ ಇರಬೇಕು. ಸಾರ್ವಜನಿಕರ ಜೋತೆ ಒಡನಾಟ, ಸಿಕ್ಕ ಸಿಕ್ಕ ಲ್ಲಿ ಉಗುಳುವುದು ಮಾಡಬಾರದು.

ಆದಷ್ಟು ಮಾಸ್ಕ್ ಧರಿಸಿ ಜಾಗರೂಕತೆಯಿಂದ ಇರಬೇಕು ಎಂದರು. ಕಾರ್ಯಕ್ರಮ ದಲ್ಲಿ ಸುರೇಶ್ ದೊಡ್ಡ ಮನೆ ಡಿಸ್ಟಿಕ್ ಸೂಪರ್ವೈಸರ್ ತಾಲ್ಲೂಕು ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ವಿಶಾಲ್ ಸಜ್ಜನ್,sts ರುದ್ರಮನಿ stls, ತಾಲೂಕ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿಗಳು ಗಂಗಮ್ಮ ಮಠಪತಿ LHV. ನವೀನ್ ಕುಮಾರ್. ಅಖಿಲೇಶ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.