Home ಸುದ್ದಿಗಳು ಕಲೆ ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ
ಕಲೆಮನರಂಜನೆ

ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ

Share
chigateri-folk-artists-awareness-meeting
Share

ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ ಪುಸ್ತಕಕ್ಕೆ ಸೀಮಿತವಲ್ಲ; ಅವು ಕಲಾವಿದರ ಬದುಕಿನ ಅವಿಭಾಜ್ಯ ಅಂಗಗಳಾಗಿವೆ’ ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸದಸ್ಯರ 12ನೇ ಸಭೆ ಹಾಗೂ ಗ್ರಾಮೀಣ ಜನರಿಗೆ ಜಾನಪದ ಕಲೆ ಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಗಲು ಹೊಲದಲ್ಲಿ ಬೆವರು ಸುರಿಸಿ, ರಾತ್ರಿ ವೇಳೆ ಡೊಳ್ಳು ಕುಣಿತ, ಬಯಲಾಟ ಹಾಗೂ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವ ಅವರು ಕಲೆಯನ್ನೇ ತಮ್ಮ ಉಸಿರಾಗಿಸಿಕೊಂಡಿದ್ದರು. ಕುರಿ ಕಾಯುತ್ತಲೇ ಜನಪದ ಗೀತೆಗಳನ್ನು ಹಾಡುವ ಇವರಿಗೆ ಕಲೆ ಕೇವಲ ಹವ್ಯಾಸವಲ್ಲ, ಅದೊಂದು ಪವಿತ್ರ ಕಾಯಕ ಎಂದು ಬಣ್ಣಿಸಿದರು. ಸರ್ಕಾರವು ಅನೇಕ ಯೋಜನೆಗಳನ್ನು ಘೋಷಿಸುತ್ತದೆ, ಆದರೆ ಅರ್ಹ ಗ್ರಾಮೀಣ ಕಲಾವಿದರಿಗೆ ಅವು ತಲುಪುತ್ತಿಲ್ಲ. ಎಷ್ಟೋ ಜಾನಪದ ಕಲಾವಿದರಿಗೆ ಇಂದಿಗೂ ಗುರುತಿನ ಚೀಟಿ ಹಾಗೂ ಪಿಂಚಣಿ ಸೌಲಭ್ಯ ಸಿಗುತ್ತಿಲ್ಲ ಎಂದು ದೂರಿದರು.

ಅರಸೀಕೆರೆ ಗೊಂದಲಿಗರ ಗೋಪಾಲ್ ಮಾತನಾಡಿ, ‘ತಿಂದು ಬಿಸಾಡಿದ ಬೀಜ ಲಕ್ಷಾಂತರ ಗಿಡವಾಗಿ ಬೆಳೆಯುವಂತೆ, ಗ್ರಾಮೀಣ ಕಲಾವಿದರ ಹಾಡು ಮತ್ತು ಕುಣಿತಗಳು ಸಂಸ್ಕೃತಿಯನ್ನು ಉಳಿಸುತ್ತಿವೆ. ಡೊಳ್ಳು ಕುಣಿತವಿಲ್ಲದೆ ಹಳ್ಳಿಯ ಹಬ್ಬಗಳಿಗೆ ಬಣ್ಣವಿಲ್ಲ. ಬಯಲಾಟಗಳು ಇಲ್ಲದಿದ್ದರೆ ರಾಮಾಯಣ-ಮಹಾಭಾರತದಂತಹ ಮಹಾಕಾವ್ಯಗಳು ಜನರಿಗೆ ತಲುಪುತ್ತಿರಲಿಲ್ಲ’ ಎಂದರು. ನಂದಿಬೇವೂರು ಶಿಕ್ಷಕ ಬಿ. ವಸಂತ್ ಮಾತನಾಡಿ, ‘ಜಾನಪದ ಗೀತೆಗಳಿಲ್ಲದಿದ್ದರೆ ನಮ್ಮ ಭಾಷೆ ಮತ್ತು ಇತಿಹಾಸ ಮರೆಯಾಗುತ್ತಿತ್ತು. ಕಲೆ ಎಂಬುದು ಮನರಂಜನೆಯ ಸಾಧನವಲ್ಲ, ಅದು ಸಮಾಜವನ್ನು ಕಟ್ಟುವ ಶಕ್ತಿ. ಸ್ವಾರ್ಥವಿಲ್ಲದ ಸೇವೆಯೇ ನಿಜವಾದ ಸಾಹಿತ್ಯ’ ಎಂದು ಹೇಳಿದರು.

ಉತ್ತಂಗಿ ಚೆನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲ್ಯಾಣ ಕಲಾವಿದರ ತಾಲ್ಲೂಕು ಅಧ್ಯಕ್ಷ ನಿಚ್ಚವನಹಳ್ಳಿ ಭೀಮಪ್ಪ, ಬಾಡದ ನಾರಪ್ಪ, ಸಣ್ಣ ಅಜ್ಜಯ್ಯ, ಕಲಾವಿದರಾದ ಸಂಕಳ್ಳಿ ಶಿವಣ್ಣ, ಗುಂಡಗತ್ತಿ ಮಂಜುನಾಥ್, ಹನುಮಂತ ಗೌಡ್ರು, ಅಜ್ಜಯ್ಯ ಸ್ವಾಮಿ ಹೊಸಕೋಟೆ, ರವೀಂದ್ರಣ್ಣ, ಗಂಗಜ್ಜಿ, ನಾಗರಾಜ್, ಜಗದೀಶ್ ಪೂಜಾರ್, ಶಂಭುಲಿಂಗನಗೌಡ, ಎಚ್.ಕೆ. ಮಲ್ಲಪ್ಪ, ಹೆಗ್ಗಪ್ಪ, ಮಾಂತೇಶ, ಮಲ್ಲಿಕಾರ್ಜುನ, ಅರ್ಜುನ್, ಮಾಳಗಿ ಆನಂದಪ್ಪ, ಕಬ್ಬಳ್ಳಿ ಕರಿಯಪ್ಪ, ಜಯಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

RAVICHANDRAN
Homeಕಲೆಮನರಂಜನೆ

 ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಾಯಭಾರಿ ವರ್ಣರಂಜಿತ, ವರ್ಣಾತಿತ ಕಲಾವಿದ

ದಾವಣಗೆರೆ: ಮನುಷ್ಯನಿಗೆ ನೆಮ್ಮದಿ ಕೊಡುವುದು ತಂದೆಯ ಹೆಗಲು, ನೆಮ್ಮದಿಯನ್ನು ಹೆಚ್ಚು ಮಾಡುವುದು ತಾಯಿಯ ಮಡಿಲು.  ರವಿಚಂದ್ರನ್...

ಹರಪನಹಳ್ಳಿ: ಅರಸೀಕೆರೆಯಲ್ಲಿ  'ಸಂಗ್ಯಾ ಬಾಳ್ಯ' ನಾಟಕ 
ಕಲೆಮನರಂಜನೆ

ಹರಪನಹಳ್ಳಿ: ಅರಸೀಕೆರೆಯಲ್ಲಿ  ‘ಸಂಗ್ಯಾ ಬಾಳ್ಯ’ ನಾಟಕ 

ಹರಪನಹಳ್ಳಿ: ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅಬ್ಬರದಿಂದಾಗಿ ಗ್ರಾಮೀಣ ಭಾಗದ ನಾಟಕ...

ಕ್ರೀಡೆಮನರಂಜನೆಸುದ್ದಿಗಳು

ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ

ವಿಜಯನಗರ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವಂತೆ, ಹಂಪಿಯ ಹೊಸಮಲಪನಗುಡಿಯ ವಿದ್ಯಾರಣ್ಯ ಪೀಠದ ಮೈದಾನದಲ್ಲಿ ಶನಿವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.