Home ಸುದ್ದಿಗಳು ಕಲೆ ಸಾಸುವೆ ಕಾಳು ಗಣಪತಿ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ
ಕಲೆಸುದ್ದಿಗಳು

ಸಾಸುವೆ ಕಾಳು ಗಣಪತಿ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ

Share
Share
ವಿಜಯನಗರ (ಹಂಪಿ) : ವಿಶ್ವವಿಖ್ಯಾತ ಹಂಪಿಯ ಸಾಸುವೆ ಕಾಳು ಗಣಪತಿ ವೇದಿಕೆಯಲ್ಲಿ ವಿಜಯನಗರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.
ಕಾರ್ಯಕ್ರಮಕ್ಕೆ ಹರಪನಹಳ್ಳಿ ತಹಶಿಲ್ದಾರ ಗಿರೀಶ್ ಬಾಬು ಅವರು ಜ್ಯೋತಿ ಬೆಳಗುವ ಮುಖಾಂತರ  ಚಾಲನೆ ನೀಡಿದರು.
ಈ ಬಾರಿಯ ವೇದಿಕೆಯಲ್ಲಿ ಒಟ್ಟು 39 ಕಲಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ನೆರೆದಿದ್ದ ಪ್ರೇಕ್ಷಕರಿಗೆ ಕಲೆಯ ರಸದೌತಣವನ್ನು ಉಣಬಡಿಸಿದ ಪ್ರಮುಖ ಕಾರ್ಯಕ್ರಮಗಳೆಂದರೆ, ವಚನ ಗಾಯನ, ರಂಗಗೀತೆಗಳ ಗಾಯನ, ಜಾನಪದ ಗೀತೆ, ಹಿಂದೂಸ್ತಾನ ಗಾಯನ, ಭರತನಾಟ್ಯ, ಸುಗಮ ಸಂಗೀತ, ತಬಲಾ ವಾದನ, ಶಾಸ್ತ್ರೀಯ ನೃತ್ಯ, ನೃತ್ಯ ರೂಪಕ, ಬಯಲಾಟ ಪದಗಳು, ತತ್ವಪದ ಗಾಯನ, ವಿಶು ಕಲೆ ಪ್ರದರ್ಶನ, ಮಿಮಿಕ್ರಿ, ದಾಸರ ಪದಗಳ ಗಾಯನ, ಸಾಮೂಹ ನೃತ್ಯ ರೂಪಕ, ವಚನ ಸಂಗೀತ, ಚೌಡ್ಕಿ ಪದಗಳ ಗಾಯನ, ಇನ್ನೂ ಹಲವಾರು ತಂಡಗಳಿಂದ ಬಗೆ ಬಗೆಯ ಕಾರ್ಯಕ್ರಮಗಳ ನಡೆದವು. ಇದೇ ವೇಳೆ ಎಲ್ಲಾ ಕಲಾವಿದರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಉಪ ನಿರ್ದೇಶಕ ರವಿಕುಮಾರ್ ಸೇರಿದಂತೆ ಹಲವು ಗಣ್ಯರು, ಸಾರ್ವಜನಿಕರು ಭಾಗವಹಿಸಿದ್ದರು. ಬಸವರಾಜ ಅಮಾತಿ ಮತ್ತು ಶ್ವೇತಾ ಅಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.
       
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.