ವಿಜಯನಗರ : ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಹಾಗೂ ಸಾಲ-ಸೌಲಭ್ಯಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಯೋಜನೆಗಳು: ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಹೊಲಿಗೆಯಂತ್ರ ವಿತರಣೆ ಯೋಜನೆಗಳಾಗಿವೆ.
ಯೋಜನೆ ಸೌಲಭ್ಯ ಪಡೆಯಲು ಬಯಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1,2ಎ ಹಾಗೂ 3ಬಿ ನಲ್ಲಿ ಬರುವ ಉಳಿದಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮರು ಅರ್ಜಿಯನ್ನು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಹ ಆಸಕ್ತರು ಅರ್ಜಿಯನ್ನು ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.gov.in ಅಥವಾ ದೂ.ಸಂ: 08392267038ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
- Applications invited
- Arivu Education Loan
- Backward Classes Welfare
- D Devaraj Urs Corporation
- Ganga Kalyana Scheme
- Hospet
- Karnataka Varthe
- Schemes
- Self Employment Loan
- Seva Sindhu
- VIJAYANAGARA
- ಅರಿವು ಸಾಲ ಯೋಜನೆ
- ಅರ್ಜಿ ಆಹ್ವಾನ
- ಕರ್ನಾಟಕ ವಾರ್ತೆ
- ಗಂಗಾ ಕಲ್ಯಾಣ ಯೋಜನೆ
- ಡಿ ದೇವರಾಜ ಅರಸು ನಿಗಮ
- ಯೋಜನೆಗಳು
- ವಿಜಯನಗರ
- ಸೇವಾಸಿಂಧು
- ಸ್ವಯಂ ಉದ್ಯೋಗ ಸಾಲ
- ಹಿಂದುಳಿದ ವರ್ಗಗಳ ಕಲ್ಯಾಣ
- ಹೊಸಪೇಟೆ
Leave a comment