Home ನೀರು ಪೋಲು: ಕುಡಿಯುವ ನೀರಿನ ಸಂಪರ್ಕ ಕಡಿತ, ಮಾಲೀಕರಿಗೆ ದಂಡ
Homeಸುದ್ದಿಗಳು

ನೀರು ಪೋಲು: ಕುಡಿಯುವ ನೀರಿನ ಸಂಪರ್ಕ ಕಡಿತ, ಮಾಲೀಕರಿಗೆ ದಂಡ

Share
Share

ದಾವಣಗೆರೆ : ನಗರದಲ್ಲಿ ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದ ಮನೆಗಳ ವಿರುದ್ಧ ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಂಡಿದೆ. ನಗರದ ಎಸ್.ಎಸ್. ಬಡಾವಣೆ ಹಾಗೂ ಬಸವೇಶ್ವರನಗರಗಳಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ, ನೀರನ್ನು ಪೋಲು ಮಾಡುತ್ತಿದ್ದ ಮನೆ ಮಾಲೀಕರಿಗೆ ದಂಡ ವಿಧಿಸುವುದರ ಜೊತೆಗೆ ಅವರ ಮನೆಗಳ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್ ಅವರು  ತಿಳಿಸಿದ್ದಾರೆ.

ಕುಡಿಯುವ ನೀರನ್ನು ಅನಗತ್ಯವಾಗಿ ಪೈಪ್‌ಗಳ ಮೂಲಕ ರಸ್ತೆಗೆ ಹರಿಸುವುದು, ವಾಹನ ತೊಳೆಯಲು ಹಾಗೂ ಗಿಡಗಳಿಗೆ ಅತಿಯಾಗಿ ಬಳಸಿ ಪೋಲು ಮಾಡುತ್ತಿದ್ದ ಮನೆಗಳನ್ನು ಗುರುತಿಸಿ ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದ ಹಲವು ಮನೆ ಮಾಲೀಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗಿದ್ದು, ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಮನೆಗಳ ಕುಡಿಯುವ ನೀರಿನ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸಲಾಗಿದೆ.

ನಗರದಾದ್ಯಂತ ನೀರು ಪೋಲು ಮಾಡುವುದನ್ನು ತಡೆಯಲು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ರಚಿಸಲಾಗಿದ್ದು, ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆ ತೀವ್ರವಾಗಿ ಮುಂದುವರೆಯಲಿದೆ.

ಸಾರ್ವಜನಿಕರಿಗೆ ಆಯುಕ್ತರ ಮನವಿ:

ನೀರು ಅತ್ಯಂತ ಅಮೂಲ್ಯವಾದದ್ದು. ಪ್ರತಿಯೊಬ್ಬ ನಾಗರಿಕರೂ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯುತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ನೀರನ್ನು ರಸ್ತೆ ತೊಳೆಯಲು, ವಾಹನ ತೊಳೆಯಲು ಅಥವಾ ಪೋಲು ಮಾಡಲು ಬಳಸಬಾರದು. ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್ ಅವರು  ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಬೆಳೆ ನಷ್ಟ ಅನುಭವಿಸಿದ ಎಲ್ಲ ರೈತರಿಗೂ ಪರಿಹಾರ : ಸಚಿವ ಜಮೀರ್ ಅಹ್ಮದ್ ಭರವಸೆ

ಹರಪನಹಳ್ಳಿ: ಪ್ರಸಕ್ತ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಜಿಲ್ಲೆಯಲ್ಲಿ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ....

Homeಸುದ್ದಿಗಳು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,97, 419  ನಮೂನೆಗಳ  ಗಣಕೀಕರಣ

ದಾವಣಗೆರೆ : ಆಗಸ್ಟ್‌ 06 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ...

Homeಸುದ್ದಿಗಳು

ರೈತರು ಆಧುನಿಕ ತೋಟಗಾರಿಕೆ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಶಾಸಕ ಸಮರ್ಥ ಶಾಮನೂರು ಕರೆ

ದಾವಣಗೆರೆ : ಆಧುನಿಕ ತೋಟಗಾರಿಕೆ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳಬೇಕು , ಪ್ರಸ್ತುತ ರೈತರು ಉಪಯೋಗಿಸುತ್ತಿರುವ ಸಾಂಪ್ರದಾಯಿಕ...

Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.