Home ಸುದ್ದಿಗಳು ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

Share
ssm dvg
Share

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್ 17ರಂದು ದಾವಣಗೆರೆ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ವಧು-ವರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಅರಸೀಕೆರೆ-ಬಿಳಿಚೋಡು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮ್ಮತ್ತಹಳ್ಳಿ ಮಂಜುನಾಥ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 17ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಬಾಪೂಜಿ ಎಂ.ಬಿ.ಎ. ಕಾಲೇಜು ಮೈದಾನದಲ್ಲಿ ವಿವಾಹ ಮಹೋತ್ಸವ ಜರುಗಲಿದೆ. ಸಾಮೂಹಿಕ ವಿವಾಹಗಳು ಸಮಾಜದಲ್ಲಿ ದುಂದುವೆಚ್ಚವನ್ನು ನಿಯಂತ್ರಿಸುತ್ತವೆ. ಹೀಗಾಗಿ ಸಾರ್ವಜನಿಕರು ಹಾಗೂ ಎಲ್ಲ ಜಾತಿಯ ಬಡ ಕುಟುಂಬಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಸರ್ವಧರ್ಮೀಯರಿಗೂ ಅವಕಾಶ, ವಿಶೇಷ ಉಡುಗೊರೆ

ಎಸ್‌.ಎಂ.ಮಲ್ಲಿಕಾರ್ಜುನ ಅಭಿಮಾನಿ ಬಳಗದ ಮುಖಂಡ ಪರಶುರಾಮಪ್ಪ ಮಾತನಾಡಿ, “ವಿವಾಹವಾಗುವ ವಧುವಿಗೆ ಬಟ್ಟೆ, ಚಿನ್ನದ ತಾಳಿ, ಕಾಲುಂಗುರ ಹಾಗೂ ವರನಿಗೆ ಉಡುಪು ಸೇರಿದಂತೆ ವಿಶೇಷ ಉಡುಗೊರೆಗಳನ್ನು ನೀಡಲಾಗುವುದು. ವಧು-ವರರಿಗೆ ವಸತಿ ಸೌಲಭ್ಯವಿದ್ದು, ಮದುವೆಗೆ ಆಗಮಿಸುವ ಸಾವಿರಾರು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಧುರ ಹಾಗೂ ವಿಧವೆಯರಿಗೂ ಮರುವಿವಾಹಕ್ಕೆ ಮುಕ್ತ ಅವಕಾಶವಿದೆ” ಎಂದರು.

ಮುಖಂಡ ಮಂಜುನಾಥ ಮಾತನಾಡಿ, “ಈ ಸಾಮೂಹಿಕ ವಿವಾಹದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ ಸೇರಿದಂತೆ ಎಲ್ಲ ಧರ್ಮದವರಿಗೂ ಅವರವರ ಧಾರ್ಮಿಕ ಸಂಪ್ರದಾಯದಂತೆ ವಿವಾಹವಾಗಲು ಅನುಕೂಲ ಮಾಡಿಕೊಡಲಾಗುವುದು. ಮದುವೆಯ ನಂತರ ಒಂದೇ ವೇದಿಕೆಯಲ್ಲಿ ‘ಸರ್ವಧರ್ಮ ಸಮ್ಮೇಳನ’ ನಡೆಯಲಿದೆ” ಎಂದು ವಿವರಿಸಿದರು.

ಬೇಕಾಗುವ ಪ್ರಮುಖ ದಾಖಲೆಗಳು:

  • ವಧು-ವರರ ಆಧಾರ್ ಕಾರ್ಡ್ ಹಾಗೂ 2 ಭಾವಚಿತ್ರಗಳು

  • ಶಾಲಾ ವರ್ಗಾವಣೆ ಪತ್ರ (TC) ಅಥವಾ ವಯಸ್ಸಿನ ದೃಢೀಕರಣ ಪತ್ರ

  • ಜಾತಿ ಪ್ರಮಾಣ ಪತ್ರ

  • ವಿವಾಹ ಆಗದಿರುವ ಬಗ್ಗೆ ಗ್ರಾಮ ಪಂಚಾಯಿತಿಯಿಂದ ಪಡೆದ ದೃಢೀಕರಣ ಪತ್ರ

ನೋಂದಣಿಗಾಗಿ ಸಂಪರ್ಕಿಸಿ:

ಹರಪನಹಳ್ಳಿ ತಾಲ್ಲೂಕಿನ ಸಾರ್ವಜನಿಕರು ಹೆಸರು ನೋಂದಾಯಿಸಲು ಹಾಗೂ ದಾಖಲಾತಿಗಳನ್ನು ಸಲ್ಲಿಸಲು ಮುಖಂಡರಾದ ಎಂ.ವಿ.ಅಂಜಿನಪ್ಪ (9448338704) ಹಾಗೂ ಮಂಜನಾಯ್ಕ (9886344583) ಅವರನ್ನು ಸಂಪರ್ಕಿಸಬಹುದಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ, ಮುಖಂಡರಾದ ಟಿ.ವೆಂಕಟೇಶ್, ಮೈದೂರು ರಾಮಪ್ಪ, ಹುಲಿಕಟ್ಟಿ ಚಂದ್ರಪ್ಪ, ಎಚ್.ವಸಂತಪ್ಪ, ಎಲ್.ಮಂಜನಾಯ್ಕ, ಹರೀಶ ದಂಡಿನ, ಗುಡಿನಾಗರಾಜ್, ಚಿಕ್ಕೇರಿ ಬಸಪ್ಪ, ಚೆನ್ನಬಸಪ್ಪ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.