ದಾವಣಗೆರೆ : ಪ್ರಸಕ್ತ ಸಾಲಿನ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ ರೂ. 40 ಲಕ್ಷ (ಶೇ.50 ರ) ಸಹಾಯಧನ ಒಟ್ಟು 1 ಕಂಬೈನ್ಡ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಗಸ್ಟ್ 14 ರೊಳಗಾಗಿ ಅರ್ಜಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Leave a comment