Home ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

Share
Share

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಆಗಸ್ಟ್ 15 ರೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಗ್ರಾಹಕರ ಪರಿಶೀಲನೆಯನ್ನು ಬಲಪಡಿಸಲು, ಅರ್ಹ ಫಲಾನುಭವಿಗಳ ನಿಖರ ದಾಖಲೆಗಳನ್ನು ನಿರ್ವಹಿಸಲು ಮತ್ತು ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ನಿಗಧಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಅನಿಲ ಗ್ರಾಹಕರ ಎಲ್‍ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಅಮಾನತ್ತುಗೊಳಿಸಲಾಗುವುದು. ಗ್ರಾಹಕರು ತಮ್ಮ ವ್ಯಾಪ್ತಿಯ ಗ್ಯಾಸ್ ವಿತರಕರ ಕಚೇರಿಗಳು, ವಿಶೇಷ ಶಿಬಿರಗಳು ಅಥವಾ ಗ್ಯಾಸ್ ಡೋರ್ ಡಿಲೇವರಿ ಸಂದರ್ಭದಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.  ಸಾರ್ವಜನಿಕರು ಗ್ಯಾಸ್ ಪೂರೈಕೆಯಲ್ಲಿ ಆಗುವ ವ್ಯತ್ಯಯವನ್ನು ತಪ್ಪಿಸಲು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Homeಸುದ್ದಿಗಳು

ರಜಾ ದಿನಗಳಲ್ಲಿ ಗ್ರಂಥಾಲಯ ಸೇವೆ ಲಭ್ಯ

ವಿಜಯನಗರ : ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರವಿರುವ ಮುಖ್ಯ ನಗರ ಕೇಂದ್ರ ಗ್ರಂಥಾಲಯ ಪ್ರತಿ ಸೋಮವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.