Home ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜೂನ್ 30 ರಿಂದ ಬಿಎಲ್‌ಒಗಳ ಮನೆ ಮನೆ ಭೇಟಿ ಆರಂಭ
Homeಸುದ್ದಿಗಳು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜೂನ್ 30 ರಿಂದ ಬಿಎಲ್‌ಒಗಳ ಮನೆ ಮನೆ ಭೇಟಿ ಆರಂಭ

Share
Share

ದಾವಣಗೆರೆ : ಭಾರತ ಚುನಾವಣಾ ಆಯೋಗವು ರಾಜ್ಯದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕ್ಕೆM ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ,  ಚುನಾವಣಾ ಆಯೋಗದ ನಿರ್ದೇಶನದಂತೆ, ದಾವಣಗೆರೆ ಜಿಲ್ಲೆಯ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO) ಜೂನ್ 30, 2026 ರಿಂದ ಆಗಸ್ಟ್ 08, 2026 ರವರೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳ (Enumeration Forms) ಮೂಲಕ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಕೈಗೊಳ್ಳಲಿದ್ದಾರೆ ಎಂದು ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಜೂನ್ 30, 2026 ರಿಂದ ಆಗಸ್ಟ್ 08, 2026 ರವರೆಗೆ ಬೂತ್ ಮಟ್ಟದ ಅಧಿಕಾರಿಗಳಿಂದ (BLO) ಮನೆ ಮನೆ ಭೇಟಿ ಕಾರ್ಯ ನಡೆಯಲಿದ್ದು, ಆಗಸ್ಟ್ 08, 2026 ರಂದು ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ (Rationalization) ಮತ್ತು ಮರುಹಂಚಿಕೆ ಪ್ರಕ್ರಿಯೆ ಜರುಗಲಿದೆ. ತದನಂತರ, ಆಗಸ್ಟ್ 17, 2026 ರ ಸೋಮವಾರದಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 17, 2026 ರಿಂದ ಸೆಪ್ಟೆಂಬರ್ 16, 2026 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಆಕ್ಷೇಪಣೆಗಳ ಪರಿಶೀಲನೆ ಹಾಗೂ ವಿಲೇವಾರಿ ಕಾರ್ಯವು ಆಗಸ್ಟ್ 17, 2026 ರಿಂದ ಅಕ್ಟೋಬರ್ 15, 2026 ರವರೆಗೆ ನಡೆಯಲಿದೆ. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19, 2026 ರ ಸೋಮವಾರದಂದು ಅಧಿಕೃತವಾಗಿ ಪ್ರಕಟಿಸಲಾಗುವುದು.

ಜಿಲ್ಲೆಯ ಅರ್ಹ ನಾಗರಿಕರು ಈ ಪರಿಷ್ಕರಣಾ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡು, ತಮ್ಮ ಹೆಸರುಗಳನ್ನು ನೋಂದಾಯಿಸಲು ಹಾಗೂ ತಿದ್ದುಪಡಿಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.