Home ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ: ಸಾರ್ವಜನಿಕರಿಗೆ ಜಿಲ್ಲಾ ಪಂಚಾಯತ್ ಆಹ್ವಾನ
Homeಸುದ್ದಿಗಳು

ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ: ಸಾರ್ವಜನಿಕರಿಗೆ ಜಿಲ್ಲಾ ಪಂಚಾಯತ್ ಆಹ್ವಾನ

Share
Share

ದಾವಣಗೆರೆ : ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಹಾಗೂ ಅರ್ಹ ಕುಟುಂಬಗಳಿಗೆ ಜಾಬ್ ಕಾರ್ಡ್ ತಲುಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ವತಿಯಿಂದ ‘ವಿ.ಬಿ.-ಜಿ ರಾಮ್ಜಿ’ಯೋಜನೆಯಡಿ ಜಾಬ್ ಕಾರ್ಡ್ ಮೇಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬವು ಯೋಜನೆಯ ಸೌಲಭ್ಯವನ್ನು ಪಡೆಯಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ನೋಂದಣಿ, ಹೊಸ ಜಾಬ್ ಕಾರ್ಡ್ ವಿತರಣೆ ಹಾಗೂ ಅಗತ್ಯ ಜಾಬ್ ಕಾರ್ಡ್ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ.ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುವುದು, ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವುದು, ಕೂಲಿ ಕೆಲಸ ಪಡೆಯುವುದು ಹಾಗೂ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಜಲ ಸಂರಕ್ಷಣೆ, ಮಳೆನೀರು ಕೊಯ್ಲು, ಕೃಷಿ, ತೋಟಗಾರಿಕೆ, ಗ್ರಾಮೀಣ ಮೂಲಸೌಕರ್ಯ ಹಾಗೂ ಸಾರ್ವಜನಿಕ ಆಸ್ತಿಗಳ  ಸೇರಿದಂತೆ ವಿವಿಧ 318 ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತಿದೆ.

ಅರ್ಹ ಗ್ರಾಮೀಣ ಕುಟುಂಬಗಳು ಈ ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಯಾವುದೇ ಅರ್ಹ ಕುಟುಂಬವು ಉದ್ಯೋಗಾವಕಾಶದಿಂದ ವಂಚಿತವಾಗದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ವಿ.ಬಿ.ಜಿ.ರಾಮ್.ಜಿ ಸಿಬ್ಬಂದಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾದವ ವಿಠ್ಠಲ ರಾವ್‌ ಅವರು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.