Home ಗಾಂಧಿನಗರದಲ್ಲಿ ಶ್ರದ್ಧಾ – ಭಕ್ತಿಯಿಂದ ಜರುಗಿದ ಶ್ರೀ ಮಲ್ನಾಡಿ ಚೌಡೇಶ್ವರಿ ಜಾತ್ರಾ ಮಹೋತ್ಸವ
Homeಸುದ್ದಿಗಳು

ಗಾಂಧಿನಗರದಲ್ಲಿ ಶ್ರದ್ಧಾ – ಭಕ್ತಿಯಿಂದ ಜರುಗಿದ ಶ್ರೀ ಮಲ್ನಾಡಿ ಚೌಡೇಶ್ವರಿ ಜಾತ್ರಾ ಮಹೋತ್ಸವ

Share
Share

ದಾವಣಗೆರೆ :  ಗಾಂಧಿನಗರದ ಶ್ರೀ ಮಲ್ನಾಡಿ ಚೌಡೇಶ್ವರಿ ದೇವಿ ದೇವಸ್ಥಾನ ಸಮಿತಿ ಹಾಗೂ ಶ್ರೀ ಯುವಕರ ಬಳಗದ ಆಶ್ರಯದಲ್ಲಿ 21ನೇ ವರ್ಷದ ಜಾತ್ರಾ ಮಹೋತ್ಸವವು ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಜರುಗಿತು. ದೇವಿಗೆ ಬೆಳಿಗ್ಗೆಯಿಂದಲೇ ವಿಶೇಷ ಅಭಿಷೇಕ, ಅಲಂಕಾರ, ನೈವೇದ್ಯ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ಭಕ್ತಾದಿಗಳು ಹರಕೆಗಳನ್ನು ಒಪ್ಪಿಸಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ಪೂರ್ವಜರ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ, ಸಾರ್ವಜನಿಕರ ಸಂಕಷ್ಟಗಳನ್ನು ನಿವಾರಿಸುವಂತೆ ದೇವಿಯಲ್ಲಿ ಪ್ರಾರ್ಥಿಸುವುದು ಈ ಜಾತ್ರೆಯ ವಾಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿಯ ಪದಾಧಿಕಾರಿಗಳು ಮಂಗಳವಾರದಿಂದ ಶುಕ್ರವಾರದವರೆಗೆ ಅತ್ಯಂತ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವವನ್ನು ಆಯೋಜಿಸಿದ್ದರು. ಬುಧವಾರ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ನಂತರ ಶ್ರೀ ಮಲ್ನಾಡಿ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿಭವ್ಯ ಮೆರವಣಿಗೆಯ ಮೂಲಕ ಗರ್ಭಗುಡಿಗೆ ಮರಳಿ ತರಲಾಯಿತು.

ಜಾತ್ರೆಯ ಪ್ರಯುಕ್ತ ಶುಕ್ರವಾರ ಸಂಜೆ ರಸಮಂಜರಿ ಮನೋರಂಜನಾ ಕಾರ್ಯಕ್ರಮಗಳು ಜರುಗಲಿವೆ. ಪ್ರಧಾನ ಅರ್ಚಕರಾದ ರಾಘು ಹಾಗೂ ಸಮಿತಿಯ ಪದಾಧಿಕಾರಿಗಳಾದ ವಾಸುದೇವ್ ಮತ್ತು ಉಚ್ಚೆಂಗಪ್ಪ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ವಾಸುದೇವ್, ಕಾರ್ಯದರ್ಶಿ ಹುಚ್ಚಂಗೆಪ್ಪ, ಉಪಾಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ನೀಲಗಿರಿಯಪ್ಪ, ಆರ್. ಶಶಿ, ವೆಂಕಿ, ಶ್ರೀನಿವಾಸ್, ರಾಕಿ ಮಂಜಪ್ಪ, ಅರವಿಂದ್, ರಾಜಪ್ಪ, ವಿಶ್ವ, ಗಂಗಪ್ಪ, ಪರಮೇಶಿ ಹಾಗೂ ಪ್ರಭು ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.