Home ಒಂಟಿಹಾಳ್ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವೆಂದು ಘೋಷಣೆ : 
Homeಆರೋಗ್ಯ

ಒಂಟಿಹಾಳ್ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವೆಂದು ಘೋಷಣೆ : 

Share
Share

ದಾವಣಗೆರೆ : ಯುವಕರು ಯಾವುದೇ ದುಶ್ಚಟ ಒಳಗಾಗದೆ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಪ್ರತಿ ಗ್ರಾಮವನ್ನು ಸಹ ತಂಬಾಕು ಮುಕ್ತ ಗ್ರಾಮವನ್ನಾಗಿ ಮಾಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರ್ ಮೂರ್ತಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಗ್ರಾಮ ಪಂಚಾಯತ್ ಬಾಡ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಒಂಟಿಹಾಳ ಗ್ರಾಮವನ್ನ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಿ ಅವರು ಮಾತನಾಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದಂತೆ ತಂಬಾಕು ಮುಕ್ತ ಹಳ್ಳಿ ಮಾರ್ಗಸೂಚಿ ಅನ್ವಯ ಒಂಟಿಹಾಳ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲಿ ಎಲ್ಲಾ ತಾಯಂದಿರು ಅವರವರ ಕುಟುಂಬದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಛಾಪು ಮೂಡಿಸಿ ಪ್ರತಿ ಮನೆಯನ್ನು ತಂಬಾಕು ಮುಕ್ತ ಮಾಡಿದ್ದೆ ಆದಲ್ಲಿ ತಂಬಾಕು ಮುಕ್ತ ಗ್ರಾಮ, ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಬಹುದು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಭಾಗಿಯ ಸಂಯೋಜಕರು ಮಹಾಂತೇಶ್ ಉಳ್ಳಾಗಡ್ಡಿ ಇವರು        ಮಾತನಾಡಿ ತಂಬಾಕು ಸೇವನೆಯಿಂದ ನಾನಾ ತರದ ಮಾರಣಾಂತಿಕ ಕಾಯಿಲೆಗಳು ಬರುತ್ತಿದ್ದು ಅದರಲ್ಲಿ ಪ್ರಮುಖವಾಗಿ ಬಾಯಿ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಇನ್ನೂ ಮುಂತಾದ ಕ್ಯಾನ್ಸರ್ ಗಳು, ಹೃದಯಘಾತ, ಪಾರ್ಶ್ವವಾಯು ಆಗುತ್ತಿದ್ದು ಇಂತಹ ಮಾರಣಾಂತಿಕ ಕಾಯಿಲೆಗಳನ್ನು ತಡೆಯಲಿಕ್ಕೆ ತಂಬಾಕು ಮುಕ್ತ ಗ್ರಾಮ ಎಂಬ ಶೀರ್ಷಿಕೆ ಪ್ರಮುಖ ಪಾತ್ರ ವಹಿಸುತ್ತವೆ.

ಹಾಗಾಗಿ ನಾವೆಲ್ಲರೂ ಸೇರಿ ತಂಬಾಕನ್ನು ಬಳಸದಂತೆ ಕ್ರಮವಹಿಸೋಣ ಮತ್ತು ಗ್ರಾಮದಲ್ಲಿ ತುಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಠಾನ ಮಾಡೋಣ ಎಂದು ಹೇಳಿದರು. ಬಾಡ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು ರಾಜಪ್ಪ, ಗ್ರಾಮದ ತಂಬಾಕು ನಿಯಂತ್ರಣ ರಾಯಬಾರಿ ಶಾಂತಮ್ಮ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ, ಪ್ರಭು, ಸಾಮಾಜಿಕ ಕಾರ್ಯಕರ್ತೆ ಶೈಲಾ ಶಾಮನೂರು, ಸಮುದಾಯ ಆರೋಗ್ಯ ಅಧಿಕಾರಿ ರುದ್ರೇಶ್, ಸ್ನಾತಕೋತ್ತರ ವಿದ್ಯಾರ್ಥಿನಿ ಪಲ್ಲವಿ, ಶಾಲೆಯ ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಹಾಗೂ ಊರಿನ ಪ್ರಮುಖರು, ಶಾಲಾ ಮಕ್ಕಳು ಹಾಜರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.