Home ಸುದ್ದಿಗಳು ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
ಸುದ್ದಿಗಳು

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

Share
ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳು  ಹೊಸಕೋಟೆ, ಮಾದಿಹಳ್ಳಿ ಮಾರ್ಗದ ರಸ್ತೆ ಅಭಿವೃದ್ದಿಪಡಿಸಬೇಕು ಮತ್ತು ಈ ಮಾರ್ಗದಲ್ಲಿ  ಸಾರಿಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ಅಖಿಲ ಭಾರತ ವಿಧ್ಯಾರ್ಥಿ ‌ಫೆಡರೇಷನ್ ಸಹಯೋಗದಲ್ಲಿ  ಕೆರೆಗುಡಿಹಳ್ಳಿ ಹಾಗೂ ಚಿಕ್ಕ‌ಕಬ್ಬಳ್ಳಿ ನಡುವೆ ಗುಂಡಿಬಿದ್ದ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಮಾತನಾಡಿ, ಕೆರೆಗುಡಿಹಳ್ಳಿಯಿಂದ ಗಡಿ ಗುಡಾಳುವರೆಗೆ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು‌.
ರೈತ ಮುಖಂಡ ಬೂದಿಹಾಳು ಸಿದ್ದೇಶ್ ಮಾತನಾಡಿ, ಶಾಸಕರ ಗಮನಕ್ಕೆ ತಂದರೂ ಸಾರಿಗೆ ಬಸ್ ಸಮಸ್ಯೆ, ರಸ್ತೆ ಅಬಿವೃದ್ದಿ ಆಗುತ್ತಿಲ್ಲ ಎಂದು ದೂರಿದರು. ದಲಿತ ಮುಖಂಡ ಕಬ್ಬಳ್ಳಿ ಮೈಲಪ್ಪ , ನಿವೃತ್ತ ಶಿಕ್ಷಕ ಜಾತಪ್ಪ, ಮಾದಿಹಳ್ಳಿ ಬೊಮ್ಮಲಿಂಗಪ್ಪ,  ಡಿ.ಹೆಚ್.ಅರುಣ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ನಾಗಪ್ಪ ಮಾತನಾಡಿದರು. ಎಇಇ  ಕುಬೇಂದ್ರ ನಾಯ್ಕ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕಿ ಮಂಜುಳಾ ಮನವಿ ಸ್ವೀಕರಿಸಿದರು.
ಉಪ ತಹಶೀಲ್ದಾರ್ ಚಂದ್ರಮೋಹನ್, ಪಿಡಿಒ ಎಚ್.ಎಸ್.ಹೇಮಂತ್ ಕುಮಾರ್, ಶ್ರೀನಿವಾಸ್, ಪುಣಭಘಟ್ಟ ಮಂಜು,ಹಗರಿ ಗುಡಿಹಳ್ಳಿ ಶಿವರಾಮ್,ಪ್ರದೀಪ್, ಕೆರೆಗುಡಿಹಳ್ಳಿ ಶಿವಣ್ಣ ಇದ್ದರು.‌

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.