ವಿಜಯನಗರ : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21 ರಂದು ನಡೆಯಲಿರುವ ಪ್ರವರ್ತನಾ (ವಿಜಯದಶಮಿ) ದಿನ ಕಾರ್ಯಕ್ರಮಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ದೀಕ್ಷಾಭೂಮಿ ಯಾತ್ರೆಗೆ ಅಕ್ಟೋಬರ್ 19 ರಿಂದ 22 ವರೆಗೆ ಜಿಲ್ಲೆಯ ಹೊಸಪೇಟೆ ತಾಲ್ಲೂಕುನಿಂದ ಪ್ರಯಾಣಿಸಲು ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಆಸಕ್ತ ಯಾತ್ರಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 9 ರವರೆಗೂ ಅವಕಾಶವಿದೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿ ಪ್ರತಿ ಮತ್ತು ಅಗತ್ಯ ದಾಖಲಾತಿಗಳನ್ನು ಕಾರ್ಯಾಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480843076 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಎ. ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment